ಹಾಸನ:ಜಿಲ್ಲೆಯಲ್ಲಿ 2 ಕೋಟಿ ರೂ. ವೆಚ್ಚದ ಚರಂಡಿ ಮತ್ತು ರಸ್ತೆ ಅಭಿವೃದ್ಧಿ ಕಾಮಗಾರಿಯನ್ನ ಡಿಸೆಂಬರ್ರೊಳಗೆ ಪೂರೈಸಲಾಗುವುದು ಎಂದು ಶಾಸಕ ಪ್ರೀತಮ್ ಜೆ.ಗೌಡ ತಿಳಿಸಿದ್ದಾರೆ.
ಕುಡಿಯುವ ನೀರಿನ ಘಟಕದ ಕಾಮಗಾರಿ: ಭೂಮಿ ಪೂಜೆ ನೆರವೇರಿಸಿದ ಶಾಸಕ ಪ್ರೀತಮ್ ಜೆ.ಗೌಡ
ಹಾಸನ ನಗರದ ಸಮೀಪವಿರುವ ತಮ್ಲಾಪುರ ಮತ್ತು ಕಂದಲಿ ಗ್ರಾಮದಲ್ಲಿ ನೂತನವಾಗಿ ನಿರ್ಮಿತವಾಗುತ್ತಿರುವ ಶುದ್ಧ ಕುಡಿಯುವ ನೀರಿನ ಘಟಕದ ಭೂಮಿ ಪೂಜೆ ನೆರವೇರಿಸುವ ಮೂಲಕ ಶಾಸಕ ಪ್ರೀತಮ್ ಜೆ.ಗೌಡ ಕಾಮಗಾರಿಗೆ ಚಾಲನೆ ನೀಡಿದರು.
ನಗರದ ಸಮೀಪವಿರುವ ತಮ್ಲಾಪುರ ಮತ್ತು ಕಂದಲಿ ಗ್ರಾಮದಲ್ಲಿ ನೂತನವಾಗಿ ನಿರ್ಮಿತವಾಗುತ್ತಿರುವ ಶುದ್ಧ ಕುಡಿಯುವ ನೀರಿನ ಘಟಕದ ಭೂಮಿ ಪೂಜೆ ನೆರವೇರಿಸುವ ಮೂಲಕ ಕಾಮಗಾರಿಗೆ ಚಾಲನೆ ನೀಡಿದರು. ನಂತರ ಮಾತನಾಡಿದ ಅವರು, ಹಾಸನದ ಹೃದಯ ಭಾಗದಲ್ಲಿರುವ ತಮ್ಲಾಪುರ ಗ್ರಾಮದಲ್ಲಿ ಬಡಾವಣೆಯಾಗಿ ಹತ್ತಾರು ವರ್ಷಗಳು ಕಳೆದಿದ್ದು, ಮೂಲಭೂತ ಸೌಕರ್ಯಗಳಿಂದ ವಂಚಿತವಾಗಿದೆ. ಇಲ್ಲಿನ ನಿವಾಸಿಗಳ ಮನವಿ ಮೇರೆಗೆ ಕುಡಿಯುವ ನೀರಿನ ಘಟಕದ ಗುದ್ದಲಿ ಪೂಜೆ ನೆರವೇರಿಸಲಾಗಿದೆ ಎಂದರು.
ಜಿಲ್ಲೆಯಲ್ಲಿ 2 ಕೋಟಿ ರೂ. ವೆಚ್ಚದ ಚರಂಡಿ ಮತ್ತು ರಸ್ತೆ ಅಭಿವೃದ್ಧಿ ಕಾಮಗಾರಿಯನ್ನ ಡಿಸೆಂಬರ್ರೊಳಗೆ ಪೂರೈಸಲಾಗುವುದು. ಇದಕ್ಕೆ ಟೆಂಡರ್ ಪ್ರಕ್ರಿಯೆ ಪ್ರಗತಿಯಲ್ಲಿದ್ದು, ಮುಂದಿನ ತಿಂಗಳು ಕಾಮಗಾರಿಯ ಗುದ್ದಲಿ ಪೂಜೆ ಮಾಡಲಾಗುವುದು ಎಂದು ತಿಳಿಸಿದರು.