ಹಾಸನ:ಹಿಂದಿನ ಸಮ್ಮಿಶ್ರ ಸರ್ಕಾರದ ಅವಧಿಯಲ್ಲಿ ಮಂಜೂರಾತಿಯಾಗಿ ಅನುಮೋದನೆಗೊಂಡ ಕಾಮಗಾರಿಗಳಿಗೆ ಗುದ್ದಲಿ ಪೂಜೆ ಮಾಡುತ್ತಾ ಶಾಸಕ ಪ್ರೀತಂಗೌಡ ಪುಕ್ಕಟೆ ಪ್ರಚಾರ ಪಡೆಯುತ್ತಿದ್ದಾರೆ ಎಂದು ಜಿಲ್ಲಾ ಪಂಚಾಯತ್ ಉಪಾಧ್ಯಕ್ಷ ಸ್ವರೂಪ್ ಆರೋಪಿಸಿದ್ದಾರೆ.
'ಶಾಸಕ ಪ್ರೀತಂಗೌಡ ಹಳೇ ಕಾಮಗಾರಿಗೆ ಗುದ್ದಲಿ ಪೂಜೆ ಮಾಡುತ್ತಾ ಪುಕ್ಕಟೆ ಪ್ರಚಾರ ಪಡೆಯುತ್ತಿದ್ದಾರೆ' - MLA preethamgowda
ಹಿಂದಿನ ಸಮ್ಮಿಶ್ರ ಸರ್ಕಾರದ ಅವಧಿಯಲ್ಲಿ ಮಂಜೂರಾತಿಯಾಗಿ ಅನುಮೋದನೆಗೊಂಡ ಕಾಮಗಾರಿಗೆ ಗುದ್ದಲಿ ಪೂಜೆ ಮಾಡುತ್ತಾ ಶಾಸಕ ಪ್ರೀತಂಗೌಡ ಪುಕ್ಕಟೆ ಪ್ರಚಾರ ಪಡೆಯುತ್ತಿದ್ದಾರೆ ಎಂದು ಜಿಲ್ಲಾ ಪಂಚಾಯತ್ ಉಪಾಧ್ಯಕ್ಷ ಸ್ವರೂಪ್ ಆರೋಪಿಸಿದ್ದಾರೆ.
ಪತ್ರಿಕಾಗೋಷ್ಟಿಯಲ್ಲಿ ಮಾತನಾಡಿದ ಅವರು, ಹಾಸನ ಕ್ಷೇತ್ರದ ಶಾಸಕ ಪ್ರೀತಂಗೌಡ ಅವರು ಪೊಳ್ಳು ರಾಜಕೀಯ ಮಾಡುತ್ತಿದ್ದಾರೆ. ನಗರದಲ್ಲಿ ಹಲವು ಸಮಸ್ಯೆಗಳಿದ್ದರೂ ಸಹ ಅವುಗಳ ಕಡೆ ಹೆಚ್ಚು ಗಮನ ಹರಿಸದೆ, ತಮ್ಮ ಪ್ರಚಾರದಲ್ಲಿ ತೊಡಗಿದ್ದಾರೆ. ಕೇವಲ ತಮ್ಮ ಭಾವಚಿತ್ರದ ಫೋಟೊಗಳ ಬೋರ್ಡ್ ಹಾಕಿಸುವಲ್ಲಿ ತಲ್ಲೀನರಾಗಿದ್ದಾರೆ ಎಂದು ದೂರಿದ್ದಾರೆ.
ಸಮ್ಮಿಶ್ರ ಸರ್ಕಾರದ ಅವಧಿಯಲ್ಲಿ ಅಂದಿನ ಸಿಎಂ ಹೆಚ್.ಡಿ. ಕುಮಾರಸ್ವಾಮಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಹೆಚ್.ಡಿ. ರೇವಣ್ಣ ಅವರು ನಗರದ ಆರ್.ಸಿ. ರಸ್ತೆಯಲ್ಲಿರುವ ಗಂಧದ ಕೋಠಿ ಆವರಣದಲ್ಲಿ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ಕಾಮಗಾರಿಗೆ ಗುದ್ದಲಿ ಪೂಜೆ ಮಾಡಿದ್ದರು. ಆದರೆ ಶಾಸಕ ಪ್ರೀತಂಗೌಡ ಅವರು, ಮತ್ತೆ ಅದೇ ಕಾಮಗಾರಿಗಳನ್ನು ಉದ್ಘಾಟನೆ ಮಾಡುವ ಅಗತ್ಯವೇನು? ಎಂದು ಸ್ವರೂಪ್ ಪ್ರಶ್ನಿಸಿದರು.