ಹಾಸನ :ಎರಡು ದಿನಗಳ ಹಿಂದೆ ಅರಸೀಕೆರೆಯ ಬೈರಗೊಂಡನಹಳ್ಳಿ ಗ್ರಾಮದಲ್ಲಿ ಚುನಾವಣಾ ಫಲಿತಾಂಶದ ಹಿನ್ನೆಲೆ ಗೆದ್ದ ಮತ್ತು ಸೋತವರ ನಡುವೆ ಮಾರಾಮಾರಿ ನಡೆದಿದೆ. ಘಟನೆಯಲ್ಲಿ 30ಕ್ಕೂ ಅಧಿಕ ಮಂದಿ ಗಂಭೀರವಾಗಿ ಗಾಯಗೊಂಡು ಆಸ್ಪತ್ರೆ ಸೇರಿದ್ದಾರೆ. ಅರಸೀಕೆರೆ ಶಾಸಕ ಶಿವಲಿಂಗೇಗೌಡ ಅವರೇ ಇದಕ್ಕೆ ಕಾರಣ ಎಂದು ಬಿಜೆಪಿ ಗಂಭೀರ ಆರೋಪ ಮಾಡಿದೆ.
ಸೋಲು ಗೆಲುವಿನ ವಿಚಾರಕ್ಕೆ ಮೊದಲು ಮಹಿಳೆಯರ ನಡುವೆ ಮಾತಿನ ಚಕುಮಕಿ ಶುರುವಾಗಿ ಬಳಿಕ ಅದು ವಿಕೋಪಕ್ಕೆ ತಿರುಗಿ ಜೆಡಿಎಸ್ ಮತ್ತು ಬಿಜೆಪಿ ಕಾರ್ಯಕರ್ತರ ನಡುವೆ ಮಾರಾಮಾರಿ ನಡೆದಿದೆ. ಘಟನೆಯಲ್ಲಿ 30ಕ್ಕೂ ಅಧಿಕ ಮಂದಿ ಗಾಯಗೊಂಡಿದ್ದು, ಅರಸೀಕೆರೆಯ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಆಸ್ಪತ್ರೆಗೆ ಭೇಟಿ ನೀಡಿದ ಸಿಎಂ ರಾಜಕೀಯ ಕಾರ್ಯದರ್ಶಿ ಎನ್ ಆರ್ ಸಂತೋಷ್, ಗಾಯಾಳುಗಳ ಆರೋಗ್ಯ ವಿಚಾರಿಸಿದರು. ಸಂತೋಷ್ ಭೇಟಿ ನೀಡಿದ ವಿಷಯವನ್ನು ತಿಳಿದ ಶಾಸಕ ಕೆ ಎಂ ಶಿವಲಿಂಗೇಗೌಡ ಅವರು ತಕ್ಷಣ ಆಸ್ಪತ್ರೆಗೆ ಭೇಟಿ ನೀಡಿ ಗಾಯಾಳುಗಳ ಆರೋಗ್ಯ ವಿಚಾರಿಸಿದರು. ವಾಪಸ್ ಹೋಗುತ್ತಿದ್ದ ವೇಳೆ ಶಾಸಕರು ಮತ್ತು ಬಿಜೆಪಿ ಕಾರ್ಯಕರ್ತರ ನಡುವೆ ಮಾತಿನ ಚಕುಮಕಿ ನಡೆದು ಕೆಲಕಾಲ ಗೊಂದಲದ ವಾತಾವaರಣ ಸೃಷ್ಠಿಯಾಯಿತು.