ಹಾಸನ: ಲಾಕ್‍ಡೌನ್‍ನಿಂದಾಗಿ ಸಂಕಷ್ಟದಲ್ಲಿರುವ 50 ಸಾವಿರ ಮಂದಿಗೆ ಆಹಾರ ಧಾನ್ಯಗಳ ಕಿಟ್ ವಿತರಿಸಲು ಶಾಸಕ ಶಿವಲಿಂಗೇಗೌಡ ಮುಂದಾಗಿದ್ದಾರೆ.
ಲಾಕ್‍ಡೌನ್ ಮತ್ತೆ ವಿಸ್ತರಣೆಯಾದ್ರೆ ಕೈಲಾದ ಸಹಾಯ ಮಾಡುತ್ತೇನೆ: ಶಾಸಕ ಶಿವಲಿಂಗೇಗೌಡ
ಅರಸೀಕೆರೆ ಕ್ಷೇತ್ರದ ಶಾಸಕ ಶಿವಲಿಂಗೇಗೌಡ ಅವರು, ಕೆಲವೊಂದು ಹಳ್ಳಿಗಳಿಗೆ ತಾವೇ ಸ್ವತಃ ತೆರಳಿ ಬೆಂಬಲಿಗರೊಂದಿಗೆ ಆಹಾರ ಧಾನ್ಯಗಳ ಕಿಟ್ ಹಂಚಿಕೆ ಮಾಡುತ್ತಿದ್ದಾರೆ. ಇನ್ನುಳಿದ ಹಳ್ಳಿಗಳಲ್ಲಿ ತಮ್ಮ ಕಾರ್ಯಕರ್ತರ ಮೂಲಕ ಕಿಟ್ ಹಂಚಿಸುತ್ತಿದ್ದಾರೆ.
ಅರಸೀಕೆರೆ ಕ್ಷೇತ್ರದ ಶಾಸಕ ಶಿವಲಿಂಗೇಗೌಡ ಅವರು, ಜನರಿಗೆ ಅನುಕೂಲವಾಗಲಿ ಎಂದು ಈಗಾಗಲೇ ಆಹಾರ ಧಾನ್ಯ ತುಂಬಿದ ಸುಮಾರು 50 ಸಾವಿರ ಕಿಟ್‍ಗಳನ್ನು ತಮ್ಮ ಕ್ಷೇತ್ರದ ವ್ಯಾಪ್ತಿಗೆ ಬರುವ 530 ಹಳ್ಳಿಗೂ ತಲುಪಿಸಲು ಸಿದ್ಧರಾಗಿದ್ದಾರೆ.
ಶಾಸಕರು ಕೆಲವೊಂದು ಹಳ್ಳಿಗಳಿಗೆ ತಾವೇ ಸ್ವತಃ ತೆರಳಿ ಬೆಂಬಲಿಗರೊಂದಿಗೆ ಕಿಟ್ ಹಂಚಿಕೆ ಮಾಡುತ್ತಿದ್ದಾರೆ. ಇನ್ನುಳಿದ ಹಳ್ಳಿಗಳಲ್ಲಿ ತಮ್ಮ ಕಾರ್ಯಕರ್ತರ ಮೂಲಕ ಕಿಟ್ ಹಂಚಿಸುತ್ತಿದ್ದಾರೆ. ಈ ಕುರಿತು ಪ್ರತಿಕ್ರಿಯಿಸಿದ ಶಾಸಕ ಶಿವಲಿಂಗೇಗೌಡ, ಎಷ್ಟು ಜನರಿಗೆ ಅಗತ್ಯವಿದೆಯೋ ಅವರಿಗೆ ತಮ್ಮ ಕೈಲಾದ ಮಟ್ಟಿಗೆ ಆಹಾರ ಧಾನ್ಯದ ಕಿಟ್ ತಲುಪಿಸುತ್ತಿದ್ದೇವೆ. ಒಂದು ವೇಳೆ ಏಪ್ರಿಲ್ ತಿಂಗಳ ನಂತರವೂ ಲಾಕ್‍ಡೌನ್ ಮುಂದುವರಿದರೆ ಕೈಲಾದ ಸಹಾಯ ಮಾಡುತ್ತೇನೆ ಎಂದು ತಿಳಿಸಿದ್ದಾರೆ.