ಹಾಸನ: ನಾವು ಯಾವ ಆಪರೇಷನ್ ಕಮಲ ಮಾಡಿಲ್ಲ. ಮೈತ್ರಿ ಸರ್ಕಾರದಲ್ಲಿ ಶಾಸಕರೇ ಬೇಸತ್ತು ರಾಜೀನಾಮೆ ನೀಡಿದ್ದಾರೆ ಅಂತಾ ಕೋಟಾ ಶ್ರೀನಿವಾಸ್ ಪೂಜಾರಿ ಹೇಳಿದ್ರು.
ಶಾಸಕರೇ ಬೇಸತ್ತು ರಾಜೀನಾಮೆ ನೀಡಿದ್ದಾರೆ: ಕೋಟಾ ಶ್ರೀನಿವಾಸ ಪೂಜಾರಿ
ರಾಜ್ಯದಲ್ಲಿ ಯಾವ ಅಭಿವೃದ್ಧಿ ಕೆಲಸಗಳು ನಡೆಯುತ್ತಿಲ್ಲ ಎಂಬ ಸಂಕಟದಿಂದ ಶಾಸಕರು ರಾಜೀನಾಮೆ ನೀಡಿದ್ದಾರೆ ಎಂದು ಮಾಜಿ ಸಚಿವ ಕೋಟಾ ಶ್ರೀನಿವಾಸ ಪೂಜಾರಿ ಹೇಳಿದ್ದಾರೆ.
ಹಾಸನ ನಗರದಲ್ಲಿ ಬಿಜೆಪಿ ಪಕ್ಷದಿಂದ ಹಮ್ಮಿಕೊಳ್ಳಲಾಗಿರುವ ಕ್ಷೇತ್ರದ ಸದಸ್ಯತ್ವ ಅಭಿಯಾನ ಕಾರ್ಯಕ್ರಮ ಉದ್ಘಾಟನೆಗೂ ಮೊದಲು ಪ್ರವಾಸಿ ಮಂದಿರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ಯಾವ ಅಭಿವೃದ್ಧಿ ಕೆಲಸವಾಗದೇ ಬೇಸತ್ತು ಸ್ವಯಂ ಪ್ರೇರಿತವಾಗಿ ಕಾಂಗ್ರೆಸ್-ಜೆಡಿಎಸ್ ಶಾಸಕರು ರಾಜೀನಾಮೆ ನೀಡಿದ್ದಾರೆ. ರಾಜ್ಯದಲ್ಲಿ ನಡೆಯುತ್ತಿರುವ ವಿದ್ಯಾಮಾನಕ್ಕೂ ಬಿಜೆಪಿಗೂ ಯಾವ ಸಂಬಂಧವಿಲ್ಲ. ಕಾಂಗ್ರೆಸ್-ಜೆಡಿಎಸ್ ಕಚ್ಚಾಟದಿಂದ ಮನನೊಂದು ಬಿಜೆಪಿ-ಜೆಡಿಎಸ್ ಶಾಸಕರು ಸ್ವೀಕರ್ ಬಳಿ ಹೋಗಿ ರಾಜೀನಾಮೆ ನೀಡಿದ್ದಾರೆ ಎಂದ್ರು. ರಾಜ್ಯದಲ್ಲಿ ಯಾವ ಅಭಿವೃದ್ಧಿ ಕೆಲಸಗಳು ನಡೆಯುತ್ತಿಲ್ಲ ಹಾಗೂ ಬಡವರ ಕೆಲಸಗಳು ಮಾಡುತ್ತಿಲ್ಲ ಎಂದು ಮನಸ್ಸಿನಲ್ಲಿ ನೋವು, ಸಂಕಟವನ್ನು ಇಟ್ಟುಕೊಂಡು ರಾಜೀನಾಮೆಗೆ ಮುಂದಾಗಿದ್ದಾರೆ. ಇದರಲ್ಲಿ ನಾವು ಪ್ರತ್ಯಕ್ಷ ಮತ್ತು ಪರೋಕ್ಷವಾಗಿ ಆಪರೇಷನ್ ಕಮಲವನ್ನು ಮಾಡಿಲ್ಲ.
ಕಾಂಗ್ರೆಸ್-ಬಿಜೆಪಿ ಸೇರಿ 13 ಜನ ಶಾಸಕರು ರಾಜೀನಾಮೆ ಕೊಟ್ಟರೆ ಸರ್ಕಾರ ಪತನವಾಗುತ್ತದೆ. ಅಷ್ಟು ಜನ ಶಾಸಕರ ರಾಜೀನಾಮೆ ಅಂಗಿಕರವಾದರೆ ಸ್ವಾಭಾವಿಕವಾಗಿ ಸರ್ಕಾರ ಬಹುಮತ ಕಳೆದುಕೊಳ್ಳುತ್ತದೆ. ನಂತರದಲ್ಲಿ ಸರ್ಕಾರ ರಚನೆಗಾಗಿ ಬಿಜೆಪಿಗೆ ಆಹ್ವಾನಿಸುತ್ತಾರೆ ಎಂದು ವಿಶ್ವಾಸ ವ್ಯಕ್ತಪಡಿಸಿದರು. ಇದೇ ವೇಳೆ ಕೇಂದ್ರ ಬಜೆಟ್‍ನಲ್ಲಿ ಅಪೂರ್ವವಾದ ಅವಕಾಶ ಸಿಕ್ಕಿದೆ ಎಂದ್ರು.