ಹಾಸನ:ಹಳೇ ದ್ವೇಷದ ಹಿನ್ನೆಲೆಯಲ್ಲಿ ಯುವಕನೊಬ್ಬನನ್ನು ಕೊಲೆ ಮಾಡಿರುವ ಘಟನೆ ಹಾಸನದ ರಿಂಗ್ ರೋಡ್ ಬಳಿ ನಡೆದಿದೆ.
ಪುನೀತ್ (27) ಎಂಬ ಯುವಕ ಕೊಲೆಯಾದ ದುರ್ದೈವಿಯಾಗಿದ್ದು, ಹುಟ್ಟುಹಬ್ಬದ ಪಾರ್ಟಿ ಮುಗಿಸಿಕೊಂಡು ವಾಪಸ್ ಬರುವ ವೇಳೆ ರಿಂಗ್ ರಸ್ತೆ ಬಳಿಯ ಉಲ್ಲಾಸ್ ಬಾರ್ ಹತ್ತಿರ ಸ್ನೇಹಿತ ಚಂದನ್ ಅಡ್ಡಗಟ್ಟಿ ಹೆಲ್ಮೆಟ್ ಮತ್ತು ಕಲ್ಲಿನಿಂದ ಮಾರಣಾಂತಿಕವಾಗಿ ಹಲ್ಲೆ ಮಾಡಿದ್ದಾನೆ.
ರಸ್ತೆಯಲ್ಲಿ ಬಡಿದಾಡಿದ ಸ್ನೇಹಿತರು ಈ ಸಂದರ್ಭದಲ್ಲಿ ಪುನೀತ್ ಕೂಡಾ ಹಲ್ಲೆ ಮಾಡುತ್ತಿದ್ದ ಚಂದನ್ ವಿರುದ್ಧ ಪ್ರತಿರೋಧ ವ್ಯಕ್ತಪಡಿಸಿದ್ರೂ ಸಾಧ್ಯವಾಗದೇ ಇದ್ದ ಕಾರಣ, ಇಬ್ಬರೂ ಕೂಡ ಗಂಭೀರವಾಗಿ ಗಾಯಗೊಂಡಿದ್ದರು. ರಕ್ತಸಿಕ್ತವಾಗಿ ಬಿದ್ದಿದ್ದ ಪುನೀತನನ್ನು ಹಾಸನದ ಸರ್ಕಾರಿ ಆಸ್ಪತ್ರೆಗೆ ದಾಖಲು ಮಾಡಿದ ಕೆಲವೇ ಕ್ಷಣದಲ್ಲಿ ಚಿಕಿತ್ಸೆ ಸ್ಪಂದಿಸದೆ ಸಾವಿಗೀಡಾಗಿದ್ದಾನೆ.
ಇನ್ನು ಸ್ಥಳಕ್ಕೆ ಭೇಟಿ ನೀಡಿದ ಬಡಾವಣೆ ಪೊಲೀಸರು ಸ್ಥಳ ಪರಿಶೀಲನೆ ನಡೆಸಿ ಮಾರಣಾಂತಿಕವಾಗಿ ಹಲ್ಲೆಗೊಳಗಾಗಿದ್ದ ಪುನೀತನನ್ನು ತಕ್ಷಣ ಆಸ್ಪತ್ರೆಗೆ ದಾಖಲು ಮಾಡಿದ್ದಾರೆ. ಆರೋಪಿ ಚಂದನ್ನನ್ನು ಕೂಡ ಆಸ್ಪತ್ರೆಗೆ ದಾಖಲು ಮಾಡಿದ್ದು, ಪೊಲೀಸರು ಈಗ ತನಿಖೆ ನಡೆಸುತ್ತಿದ್ದು ಹಾಸನದ ಬಡವನ ಪೊಲೀಸ್ ಠಾಣೆಯ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.