ಹಾಸನ(ಅರಸೀಕೆರೆ): ಕ್ಷುಲ್ಲಕ ಕಾರಣಕ್ಕೆ ವ್ಯಕ್ತಿಯೊಬ್ಬನನ್ನು ಕೊಲೆ ಮಾಡಿರುವ ಘಟನೆ ಜಿಲ್ಲೆಯ ಅರಸೀಕೆರೆ ತಾಲೂಕಿನ ಗಂಡಸಿ ಸಮೀಪದ ಕುಡುಕುಂದಿ ಗ್ರಾಮದಲ್ಲಿ ನಡೆದಿದೆ.
ಹಾಸನ: ಪುಂಡರಿಂದ ಹಲ್ಲೆಗೊಳಗಾಗಿದ್ದ ವ್ಯಕ್ತಿ ಚಿಕಿತ್ಸೆ ಫಲಿಸಿದೇ ಸಾವು - Murder in Hassan
ಕ್ಷುಲ್ಲಕ ಕಾರಣಕ್ಕೆ ವ್ಯಕ್ತಿಯ ಮೇಲೆ ಪುಂಡರು ಹಲ್ಲೆ ನಡೆಸಿದ್ದರಿಂದ ಚಿಕಿತ್ಸೆ ಫಲಕಾರಿಯಾಗದೇ ವ್ಯಕ್ತಿಯೊಬ್ಬ ಮೃತಪಟ್ಟಿರುವ ಘಟನೆ ಹಾಸನ ಜಿಲ್ಲೆಯಲ್ಲಿ ನಡೆದಿದೆ.
ರಮೇಶ್ (40) ಮೃತ ವ್ಯಕ್ತಿ. ಅದೇ ಗ್ರಾಮದ ಪ್ರವೀಣ್, ದೊರೆ, ಪುನೀನ್, ಚೇತನ್, ಸಚಿನ್ ಎಂಬುವವರು ಕೊಲೆ ಮಾಡಿದ್ದಾರೆ ಎಂದು ರಮೇಶ್ ಪೋಷಕರು ಆರೋಪಿಸಿದ್ದಾರೆ. ಆ.16 ರಂದು ಮೃತಪಟ್ಟಿರುವ ರಮೇಶ್ ಮದ್ಯಪಾನ ಮಾಡಿ ಮನೆಗೆ ಹೋಗುತ್ತಿದ್ದ. ಈ ವೇಳೆ, ಗ್ರಾಮದ ಕೆಲ ಹುಡುಗರು ರಮೇಶ್ ವಿರುದ್ಧ ಅಪಹಾಸ್ಯ ಮಾಡಿದ್ದರು ಎನ್ನಲಾಗಿದೆ. ಹೀಗಾಗಿ ರಮೇಶ್ ಸಹ ಪ್ರತಿಯಾಗಿ ಎದುರು ಮಾತನಾಡಿದ್ದಾನೆ. ಇಷ್ಟಕ್ಕೆ ಕುಪಿತಗೊಂಡ ಗ್ರಾಮದ ಪಡ್ಡೆ ಹುಡುಗರು, ಹಿಂದೆ ನಡೆದ ಕೆಲವು ಕಹಿ ಘಟನೆಗಳನ್ನ ಮನಸ್ಸಿನಲ್ಲಿಟ್ಟುಕೊಂಡು ಏಕಾಏಕಿ ರಮೇಶ್ ಮೇಲೆ ಹಲ್ಲೆ ನಡೆಸಿ ಪರಾರಿಯಾಗಿದ್ದಾರೆ.
ಇನ್ನು ಬೆಳಗ್ಗೆ ಸ್ಥಳದಲ್ಲಿಯೇ ಕುಸಿದು ಬಿದ್ದಿದ್ದ ರಮೇಶ್ನನ್ನ ಜಿಲ್ಲಾ ಸರ್ಕಾರಿ ಆಸ್ಪತ್ರೆಗೆ ದಾಖಲು ಮಾಡಿದರು ಸಹ ಚಿಕಿತ್ಸೆಗೆ ಸ್ಪಂದಿಸದೇ ಮೃತಪಟ್ಟಿದ್ದಾರೆ. ಇನ್ನು ರಮೇಶ್ ಮೃತಪಡಲು ವೈದ್ಯರ ನಿರ್ಲಕ್ಷ್ಯ ಕಾರಣ ಎಂದು ಸಂಬಂಧಿಕರು ಆರೋಪಿಸಿದ್ದಾರೆ. ಈ ಸಂಬಂಧ ಗಂಡಸಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.