ಹಾಸನ : ಅರಣ್ಯ ದೇಶದ ಸಂಪತ್ತು, ಅದನ್ನು ಸಂರಕ್ಷಣೆ ಮಾಡುವುದು ಪ್ರತಿಯೊಬ್ಬ ನಾಗರಿಕನ ಕರ್ತವ್ಯ ಎಂದು ಇಲ್ಲಿನ ಪ್ರಧಾನ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಧೀಶ ಶಿವಣ್ಣ ತಿಳಿಸಿದ್ದಾರೆ.
ರಾಷ್ಟ್ರೀಯ ಅರಣ್ಯ ಹುತಾತ್ಮರ ದಿನಾಚರಣೆ ಅಂಗವಾಗಿ ಅರಣ್ಯ ಇಲಾಖೆ ವತಿಯಿಂದ ನಗರದ ಅರಣ್ಯ ಭವನದಲ್ಲಿ ಏರ್ಪಡಿಸಿದ್ದ ಕಾರ್ಯಕ್ರಮದಲ್ಲಿ ಅರಣ್ಯ ಹುತಾತ್ಮರಿಗೆ ಗೌರವ ನಮನ ಸಲ್ಲಿಸಿ ಮಾತನಾಡಿದ ಅವರು, ದೇಶದಲ್ಲಿ ಅರಣ್ಯ ಸಂಪತ್ತು ಇರುವುದರಿಂದ ಕಾಲಕಾಲಕ್ಕೆ ಮಳೆ ಬೆಳೆಯಾಗುತ್ತಿದೆ. ಜನರು ಸುಖ ಸಮೃದ್ಧಿಯಿಂದ ಜೀವನ ನಡೆಸುತ್ತಿದ್ದಾರೆ. ಹಾಗಾಗಿ ಅರಣ್ಯವನ್ನು ಇನ್ನಷ್ಟು ಮುತುವರ್ಜಿಯಿಂದ ಕಾಪಾಡಿಕೊಳ್ಳಬೇಕು ಎಂದರು.