ಕರ್ನಾಟಕ

karnataka

ETV Bharat / state

ಹಾಸನದಲ್ಲಿ ಕೊರೊನಾ ಪಾಸಿಟಿವ್​ ಪ್ರಕರಣ ಪತ್ತೆಯಾಗಿಲ್ಲ: ಡಿಸಿ - ಕೊರೊನಾ ಲೆಟೆಸ್ಟ್​ ಅಪ್​ಡೇಟ್​

ಹಾಸನದಲ್ಲಿ ಈವರೆಗೆ ಯಾವುದೇ ಪಾಸಿಟಿವ್​ ಪ್ರಕರಣ ಪತ್ತೆಯಾಗಿಲ್ಲ ಎಂದು ಜಿಲ್ಲಾಧಿಕಾರಿ ಆರ್ ಗಿರೀಶ್ ತಿಳಿಸಿದ್ದಾರೆ. ಕೊರೊನಾ ವೈರಸ್ ಸ್ಥಿತಿಗತಿ ಇಂದು ಅವರು ಅಂಕಿ ಆಂಶ ಬಿಡುಗಡೆ ಮಾಡಿದ್ದಾರೆ.

No Corona positive case detected in Hassan
ಹಾಸನದಲ್ಲಿ ಈವರೆಗೆ ಯಾವುದೇ ಕೊರೊನಾ ಪಾಸಿಟಿವ್​ ಪ್ರಕರಣ ಪತ್ತೆಯಾಗಿಲ್ಲ: ಜಿಲ್ಲಾಧಿಕಾರಿ

By

Published : Apr 30, 2020, 9:34 PM IST

ಹಾಸನ: ಕೊರೊನಾ ವೈರಸ್ ಸ್ಥಿತಿಗತಿ ಕುರಿತು ಏ.30ರ ಅಂಕಿ ಆಂಶ ಬಿಡುಗಡೆ ಮಾಡಿದ್ದು, ಈವರೆಗೆ ಯಾವುದೇ ಪಾಸಿಟಿವ್​ ಪ್ರಕರಣ ಪತ್ತೆಯಾಗಿಲ್ಲ ಎಂದು ಜಿಲ್ಲಾಧಿಕಾರಿ ಆರ್ ಗಿರೀಶ್ ತಿಳಿಸಿದ್ದಾರೆ.

ಜಿಲ್ಲೆಯಲ್ಲಿ ಇದುವರೆಗೆ ಕೊರೊನಾ ಶಂಕಿತರು ಎಂದು 2,195 ಜನರನ್ನು ಪರೀಕ್ಷೆಗೆ ಒಳಪಡಿಸಲಾಗಿದ್ದು, ಇವರಲ್ಲಿ 714 ಜನ ಭಾರತೀಯರು ಹಾಗೂ 109 ಜನ ವಿದೇಶಿಯರಾಗಿದ್ದಾರೆ. ಶೀತ, ನೆಗಡಿ, ಕೆಮ್ಮು ಇರುವ 1,284 ವ್ಯಕ್ತಿಗಳನ್ನು ಸಹ ಪರೀಕ್ಷಿಸಲಾಗಿದೆ. 10 ದಿನದಿಂದ ಜ್ವರ, ಕೆಮ್ಮು, ನೆಗಡಿ ಕಂಡು ಬಂದಿರುವ 88 ಜನರನ್ನು ಪರೀಕ್ಷಿಸಲಾಗಿದೆ. 1,893 ಜನರ ಗಂಟಲ ದ್ರವವನ್ನು ಪರೀಕ್ಷೆಗೆ ಒಳಪಡಿಸಿದ್ದು, ಎಲ್ಲರ ವರದಿ ನೆಗೆಟಿವ್​ ಬಂದಿದೆ. 79 ಜನರನ್ನು ಮನೆಯಲ್ಲಿ ಪ್ರತ್ಯೇಕ ಕೊಠಡಿಯಲ್ಲಿರಿಸಿ 14 ದಿನಗಳ ವರೆಗೆ ನಿಗಾ ವಹಿಸಲಾಗಿದೆ. ಅಲ್ಲದೇ 14 ದಿನದಿಂದ 28 ದಿನಗಳ ವರೆಗಿರುವ 25 ಮಂದಿಯ ದೈನಂದಿನ ಆರೋಗ್ಯ ಮಾಹಿತಿ ಪಡೆಯಲಾಗುತ್ತಿದೆ.


467 ಜನರು 28 ದಿನಗಳ ಕ್ವಾರಂಟೈನ್ ಅವಧಿ ಪೂರ್ಣಗೊಳಿಸಿದ್ದಾರೆ. 32 ಜನ ಆಸ್ಪತ್ರೆಯ ಐಸೋಲೇಷನ್‌ನಲ್ಲಿದ್ದು, 664 ಮಂದಿಯನ್ನು ಆಸ್ಪತ್ರೆಯಿಂದ ಬಿಡುಗಡೆ ಮಾಡಲಾಗಿದೆ ಎಂದು ಅವರು ತಿಳಿಸಿದ್ದಾರೆ.


ABOUT THE AUTHOR

...view details