ಕರ್ನಾಟಕ

karnataka

ETV Bharat / state

ಅರಕಲಗೂಡಲ್ಲಿ ಬೀದಿ ನಾಯಿ ಕಾಟ: ಅಧಿಕಾರಿಗಳ ವಿರುದ್ಧ ಸಾರ್ವಜನಿಕರ ಆಕ್ರೋಶ - ಅರಕಲಗೂಡು ಸಾರ್ವಜನಿಕರಿಂದ ಹಿಡಿಶಾಪ

ಬೀದಿ ನಾಯಿಗಳ ಹಾವಳಿ ತಪ್ಪಿಸುವಂತೆ ಪಟ್ಟಣ ಪಂಚಾಯಿತಿಗೆ ಸ್ಥಳೀಯರು ಮನವಿ ಸಲ್ಲಿಸಿದ್ದಾರೆ. ಆದರೆ, ಅಧಿಕಾರಿಗಳು ಯಾವುದೇ ಕ್ರಮ ಕೈಗೊಳ್ಳದ ಪರಿಣಾಮ ಸಾರ್ವಜನಿಕರು ಪಟ್ಟಣ ಪಂಚಾಯಿತಿ ಅಧಿಕಾರಿಗಳಿಗೆ ಹಿಡಿಶಾಪ ಹಾಕುತ್ತಿದಾರೆ. ಪಟ್ಟಣದ ಪೇಟೆ, ಬಸ್‌ ನಿಲ್ದಾಣ ರಸ್ತೆ, ಸಿಮೆಂಟ್‌ ರೋಡ್‌, ಶಿಕ್ಷಕರ ಭವನದ ಎದುರು, ಹಳೆಬಸ್ ಸ್ಟ್ಯಾಂಡ್ ರಸ್ತೆಯಲ್ಲಿ ಬೀದಿ ನಾಯಿಗಳ ಹಾವಳಿ ಹೆಚ್ಚಾಗಿದೆ.

Officers have not taken action for street dog Arakkalgodu
ಬೀದಿ ನಾಯಿ ಹಾವಳಿಗೆ ಕ್ರಮ ಕೈಗೊಳ್ಳದ ಅಧಿಕಾರಿಗಳು, ಅರಕಲಗೂಡು ಸಾರ್ವಜನಿಕರಿಂದ ಹಿಡಿಶಾಪ

By

Published : Sep 30, 2020, 7:02 PM IST

ಅರಕಲಗೂಡು: ಪಟ್ಟಣದ ನಾನಾ ಕಡೆ ಬೀದಿ ನಾಯಿಗಳ ಹಾವಳಿ ಹೆಚ್ಚಾಗಿದ್ದು, ಜನಸಾಮಾನ್ಯರು ಒಬ್ಬಂಟಿಯಾಗಿ ಓಡಾಡುವುದು ಕಷ್ಟಕರವಾಗಿದೆ. ಗಲ್ಲಿ ಗಲ್ಲಿಗಳಲ್ಲಿ ತಿರುಗಾಡುತ್ತಿರುವ ಬೀದಿ ನಾಯಿಗಳ ಹಿಂಡು ವಾಹನ ಸವಾರರ ಮೇಲೆ ದಾಳಿ ಮಾಡುತ್ತವೆ. ಕೆಲ ನಾಯಿಗಳು ಬೈಕ್ ‌ - ಕಾರುಗಳ ಹಿಂದೆ ಓಡಿ ಬರುತ್ತಿರುವ ಪರಿಣಾಮ ವಾಹನ ಸವಾರರು ಆತಂಕ ಪಡಬೇಕಾಗಿದೆ. ರಸ್ತೆಯಲ್ಲಿ ಚಿಕ್ಕ ಮಕ್ಕಳು, ವಯೋವೃದ್ಧರು ಸಂಚಾರ ಮಾಡಲು ಹಿಂದೇಟು ಹಾಕುವಂತಾಗಿದೆ. ರಾತ್ರಿ ವೇಳೆ ವಾರ್ಡ್‌, ಕಾಲೋನಿ ನಿವಾಸಿಗಳ ನಿದ್ದೆಗೆಡಿಸುತ್ತಿರುವ ಬಿಡಾಡಿ ನಾಯಿಗಳ ಉಪಟಳ ಹೆಚ್ಚಾಗಿದೆ.

ಬೀದಿ ನಾಯಿ ಹಾವಳಿಗೆ ಕ್ರಮ ಕೈಗೊಳ್ಳದ ಅಧಿಕಾರಿಗಳು, ಅರಕಲಗೂಡು ಸಾರ್ವಜನಿಕರಿಂದ ಹಿಡಿಶಾಪ

ಬೀದಿ ನಾಯಿಗಳ ಹಾವಳಿ ತಪ್ಪಿಸುವಂತೆ ಪಟ್ಟಣ ಪಂಚಾಯಿತಿಗೆ ಸ್ಥಳೀಯರು ಮನವಿ ಸಲ್ಲಿಸಿದ್ದಾರೆ. ಆದರೆ, ಅಧಿಕಾರಿಗಳು ಯಾವುದೇ ಕ್ರಮ ಕೈಗೊಳ್ಳದ ಪರಿಣಾಮ ಸಾರ್ವಜನಿಕರು ಪಟ್ಟಣ ಪಂಚಾಯಿತಿ ಅಧಿಕಾರಿಗಳಿಗೆ ಹಿಡಿಶಾಪ ಹಾಕುತ್ತಿದಾರೆ. ಪಟ್ಟಣದ ಪೇಟೆ, ಬಸ್‌ ನಿಲ್ದಾಣ ರಸ್ತೆ, ಸಿಮೆಂಟ್‌ ರೋಡ್‌, ಶಿಕ್ಷಕರ ಭವನದ ಎದುರು, ಹಳೆಬಸ್ ಸ್ಟ್ಯಾಂಡ್ ರಸ್ತೆಯಲ್ಲಿ ಬೀದಿ ನಾಯಿಗಳ ಹಾವಳಿ ಹೆಚ್ಚಾಗಿದೆ.

ಅನಕೃ ವೃತ್ತ, ಹೆಂಟಗೆರೆ ರಸ್ತೆ, ಸಂತೆಮಾಳ ಸಿಮೆಂಟ್‌ ರೋಡ್‌ ಮಾರ್ಗದ ರಸ್ತೆಗಳಲ್ಲಿ ಮಾಂಸದಂಗಡಿಗಳು ಇವೆ. ಈ ಪ್ರದೇಶದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಬೀದಿ ನಾಯಿಗಳು ಕಾಣಿಸುತ್ತವೆ. ಅಂಗಡಿದಾರರು ಸಾರ್ವಜನಿಕ ಸ್ಥಳ, ಕಸದ ತೊಟ್ಟಿಯಲ್ಲಿ ಮಾಂಸದ ತ್ಯಾಜ್ಯ ಹಾಕುವುದರಿಂದ ನಾಯಿಗಳು ಚೆಲ್ಲಾಟ ಹೆಚ್ಚಾಗಿದೆ. ನಾಯಿಗಳ ಹಾವಳಿ ತಡೆಯಲು ಕೆಲ ವರ್ಷಗಳ ಹಿಂದೆ ಪಟ್ಟಣ ಪಂಚಾಯಿತಿ ವಿಷ ಹಾಕಿ ನಾಯಿಗಳನ್ನು ಕೊಂದಿತ್ತು. ಇದರಿಂದ ಕೆಲ ಸಂಘಟನೆಗಳು ವಿರೋಧ ವ್ಯಕ್ತಪಡಿಸಿದ್ದವು. ಆದ್ದರಿಂದ ಪಟ್ಟಣ ಪಂಚಾಯಿತಿ ಅಧಿಕಾರಿಗಳು ಬೀದಿ ನಾಯಿಗಳ ನಿಯಂತ್ರಣಕ್ಕೆ ಹೋಗುವುದನ್ನು ಬಿಟ್ಟಿತ್ತು. ಅಲ್ಲಿಂದ ಇಲ್ಲಿಯವರೆಗೆ ಬೀದಿ ನಾಯಿಗಳ ಹಾವಳಿ ಹೆಚ್ಚಾಗಿದೆ.

ಸಂತಾನ ತಡೆ ಚಿಕಿತ್ಸೆ ಮಾಡುವುದರಿಂದ ಬೀದಿ ನಾಯಿಗಳ ಹಾವಳಿ ನಿಯಂತ್ರಣ ಮಾಡಬಹುದು. ಆದರೆ, ಈ ಕಾರ್ಯಕ್ಕೆ ಪಟ್ಟಣ ಪಂಚಾಯಿತಿ ಮುಂದಾಗುತ್ತಿಲ್ಲ. ಆದ್ದರಿಂದ ಪಟ್ಟಣದಲ್ಲಿ ಬೀದಿ ನಾಯಿಗಳ ಹಾವಳಿ ಹೆಚ್ಚಾಗಿದೆ. ಬೀದಿ ನಾಯಿಗಳ ಉಪಟಳಕ್ಕೆ ಜನ ಕಂಗಾಲಾಗಿದ್ದಾರೆ. ಪಟ್ಟಣ ಪಂಚಾಯಿತಿ ಇವುಗಳ ನಿಯಂತ್ರಣ ಮಾಡುವುದಕ್ಕೆ ನಿರ್ಲಕ್ಷ್ಯ ವಹಿಸದೇ ಕ್ರಮ ಕೈಗೊಳ್ಳಬೇಕು ಎಂದು ಸಾರ್ವಜನಿಕರ ಒತ್ತಾಯವಾಗಿದೆ.

ABOUT THE AUTHOR

...view details