ಹಾಸನ:ಗುಡಿಸಲಿಗೆ ಬೆಂಕಿ ಬಿದ್ದ ಪರಿಣಾಮ ವೃದ್ಧನೋರ್ವ ಸುಟ್ಟು ಕರಕಲಾಗಿರುವ ಘಟನೆ ಜಿಲ್ಲೆಯ ಚನ್ನರಾಯಪಟ್ಟಣದಲ್ಲಿ ನಡೆದಿದೆ.
ಗುಡಿಸಲಿಗೆ ಬೆಂಕಿ ಬಿದ್ದು ಸುಟ್ಟು ಕರಕಲಾದ ವೃದ್ಧ ವ್ಯಕ್ತಿ - ಹಾಸನ ಅಗ್ನಿ ಅವಘಡ
ರಾತ್ರಿ ಮಲಗಿರುವ ವೇಳೆ ಆಕಸ್ಮಿಕವಾಗಿ ಗುಡಿಸಲಿಗೆ ಬೆಂಕಿ ಹತ್ತಿದ್ದು, ವೃದ್ಧನೋರ್ವ ಸುಟ್ಟು ಕರಕಲಾಗಿರುವ ಘಟನೆ ಹಾಸನದಲ್ಲಿ ನಡೆದಿದೆ.
ಗುಡಿಸಲಿಗೆ ಬೆಂಕಿ ಬಿದ್ದು ಸುಟ್ಟು ಕರಕಲಾದ ವೃದ್ಧ
ತಮಿಳುನಾಡು ಮೂಲದ 60 ವರ್ಷದ ಮಣಿ ಮೃತ ದುರ್ದೈವಿ. ಕಳೆದ ಆರು ತಿಂಗಳಿನಿಂದ ಚನ್ನರಾಯಪಟ್ಟಣದ ಮೈಸೂರು ರಸ್ತೆಯಲ್ಲಿ ಮಣಿ ಗುಡಿಸಲೊಂದರಲ್ಲಿ ವಾಸವಾಗಿದ್ದರು. ನಿನ್ನೆ ರಾತ್ರಿ ಗುಡಿಸಲಿನಲ್ಲಿ ಮಲಗಿರುವ ವೇಳೆ ಆಕಸ್ಮಿಕವಾಗಿ ಬೆಂಕಿ ಬಿದ್ದಿದ್ದು, ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.
ಸ್ಥಳಕ್ಕೆ ಚನ್ನರಾಯಪಟ್ಟಣ ಪೊಲೀಸರು ಭೇಟಿ ನೀಡಿ, ಪ್ರಕರಣ ದಾಖಲಿಸಿಕೊಂಡಿದ್ದಾರೆ.