ಕರ್ನಾಟಕ

karnataka

ETV Bharat / state

ಹಾಸನದಲ್ಲಿ ಕೊರೊನಾಗೆ ಮತ್ತೊಂದು ಬಲಿ - ಹಾಸನ ಲೇಟೆಸ್ಟ್​ ನ್ಯೂಸ್

ಹಾಸನದಲ್ಲಿ ಮಹಾಮಾರಿ ಕೊರೊನಾಗೆ ಮತ್ತೋರ್ವ ವ್ಯಕ್ತಿ ಸಾವನ್ನಪ್ಪಿದ್ದಾರೆ. ಈ ಮೂಲಕ ಜಿಲ್ಲೆಯಲ್ಲಿ ಸಾವನ್ನಪ್ಪಿದವರ ಸಂಖ್ಯೆ 7ಕ್ಕೆ‌ ಏರಿಕೆಯಾಗಿದೆ.

One Corona patient died in Hassan
ಹಾಸನದಲ್ಲಿ ಕೊರೊನಾಗೆ ಮತ್ತೊಂದು ಬಲಿ

By

Published : Jul 4, 2020, 2:08 PM IST

ಹಾಸನ: ಜಿಲ್ಲೆಯಲ್ಲಿ ಕಿಲ್ಲರ್‌ ಕೊರೊನಾಗೆ ಮತ್ತೊಂದು ಸಾವು ಸಂಭವಿಸಿದ್ದು, ಮೃತರ ಸಂಖ್ಯೆ 7ಕ್ಕೆ‌ ಏರಿಕೆಯಾಗಿದೆ.

ಹೊಳೆನರಸೀಪುರದಲ್ಲಿ ಬೇಕರಿ ಇಟ್ಟುಕೊಂಡಿದ್ದ ಬೇಲೂರು ತಾಲೂಕಿನ 38 ವರ್ಷದ ವ್ಯಕ್ತಿ ನಿನ್ನೆ ತಮ್ಮ ಸ್ವಗೃಹದಲ್ಲಿ ತೀವ್ರ ಹೃದಯಾಘಾತದಿಂದ ಸಾವನಪ್ಪಿದ್ದರು. ಬಳಿಕ ಅವರ ಗಂಟಲು ದ್ರವ ಮಾದರಿ ಪರೀಕ್ಷೆ ನಡೆಸಲಾಗಿತ್ತು.‌ ಇಂದು ವರದಿಯಲ್ಲಿ ಪಾಸಿಟಿವ್ ಬಂದಿದೆ.

ಮೃತದೇಹವನ್ನು ತಾಲೂಕು ನೋಡಲ್ ಅಧಿಕಾರಿ ಡಾ.ನರಸೇಗೌಡ ಅವರ ಮಾರ್ಗದರ್ಶನದಲ್ಲಿ ಸರ್ಕಾರಿ‌ ನಿಯಮಾನುಸಾರ ಸುರಕ್ಷತಾ ಕ್ರಮಗಳೊಂದಿಗೆ ಅಂತ್ಯಕ್ರಿಯೆ ನೆರವೇರಿಸಲಾಗಿದೆ.

ಈ ಮೂಲಕ ಜಿಲ್ಲೆಯಲ್ಲಿ ಕೊರೊನಾ ಸಾವಿನ‌ ಸಂಖ್ಯೆ 7ಕ್ಕೆ‌ ಏರಿಕೆಯಾಗಿದ್ದು, ಒಟ್ಟು ಸೋಂಕಿತ ಪ್ರಕರಣಗಳ ಸಂಖ್ಯೆ 445 ಕ್ಕೆ ಏರಿಕೆ ಖಂಡಿದೆ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ. ಸತೀಶ್ ತಿಳಿಸಿದ್ದಾರೆ.

ABOUT THE AUTHOR

...view details