ಬೈಕ್ಗೆ ಲಾರಿ ಡಿಕ್ಕಿ: ಸವಾರ ಸ್ಥಳದಲ್ಲೇ ಸಾವು - one died in byke-lorry accident news
ಬೈಕ್ಗೆ ಲಾರಿ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಮೃತಪಟ್ಟ ಘಟನೆ ಹಾಸನ ಜಿಲ್ಲೆಯ ಚನ್ನಪಟ್ಟಣದ ಹೊರವಲಯದಲ್ಲಿ ನಡೆದಿದೆ.
ಬೈಕ್ ಸವಾರ ಸ್ಥಳದಲ್ಲೇ ಸಾವು
ಹಾಸನ: ದ್ವಿಚಕ್ರ ವಾಹನಕ್ಕೆ ಲಾರಿ ಡಿಕ್ಕಿ ಹೊಡೆದ ಪರಿಣಾಮ ಸ್ಥಳದಲ್ಲೇ ಓರ್ವ ವ್ಯಕ್ತಿ ಮೃತಪಟ್ಟಿರುವ ಘಟನೆ ಹಾಸನದಲ್ಲಿ ನಡೆದಿದೆ.
ಹಾಸನ ಜಿಲ್ಲೆಯ ಆಲೂರು ತಾಲೂಕಿನ ಸಿಂಗಾಪುರ ಗ್ರಾಮದ ನಿವಾಸಿ ಎಂದು ತಿಳಿದುಬಂದಿದ್ದು, ಕರ್ತವ್ಯ ನಿಮಿತ್ತ ಹಾಸನಕ್ಕೆ ಬಂದು ವಾಪಸ್ ಗ್ರಾಮಕ್ಕೆ ತೆರಳುವ ವೇಳೆ ಈ ಅಪಘಾತ ಸಂಭವಿಸಿದೆ. ಲಾರಿ ಚಾಲಕನ ನಿರ್ಲಕ್ಷ್ಯವೇ ಅಪಘಾತಕ್ಕೆ ಕಾರಣ ಎನ್ನಲಾಗಿದೆ ಹಾಸನ ಸಂಚಾರಿ ಪೊಲೀಸರು ಸ್ಥಳಕ್ಕೆ ಆಗಮಿಸಿ ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಿದ್ದು, ಘಟನೆ ಸಂಬಂಧ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.