ಹಾಸನ/ಸಕಲೇಶಪುರ:ಕೂಲಿ ಕಾರ್ಮಿಕನ ಮೇಲೆ ಕಾಡಾನೆಯೊಂದು ದಾಳಿ ಮಾಡಿದ ಹಿನ್ನೆಲೆಯಲ್ಲಿ ಗಂಭೀರವಾಗಿ ಗಾಯಗೊಂಡಿದ್ದು ಸಾವು-ಬದುಕಿನ ನಡುವೆ ಹೊರಾಟ ನಡೆಸುತ್ತಿರುವ ಘಟನೆ ಸಕಲೇಶಪುರ ತಾಲೂಕಿನಲ್ಲಿ ನಡೆದಿದೆ.
ಸಕಲೇಶಪುರ ತಾಲೂಕಿನ ಹಲಸುಲಿಗೆ ಸಮೀಪದ ಅಸಿಡೇ ಗ್ರಾಮದ ಮಂಜುನಾಥ್ ಎಂಬುವರ ಕಾಫಿ ತೋಟದಲ್ಲಿ ಕೂಲಿ ಕಾರ್ಮಿಕನಾಗಿ ಕೆಲಸ ಮಾಡುತ್ತಿದ್ದ ವಸಂತ್ ಮೇಲೆ ಸಂಜೆ ಕಾಡಾನೆ ದಾಳಿ ನಡೆಸಿದೆ. ತೀವ್ರವಾಗಿ ಗಾಯಗೊಂಡ ವಸಂತ್, ಸಾವು- ಬದುಕಿನ ನಡುವೆ ಹೋರಾಟ ನಡೆಸುತ್ತಿದ್ದಾರೆ. ಹೆಚ್ಚಿನ ಚಿಕಿತ್ಸೆಗಾಗಿ ಸಕಲೇಶಪುರದ ಆಸ್ಪತ್ರೆಗೆ ದಾಖಲಿಸಲಾಗಿದೆ.