ಹಾಸನ: ಜಿಲ್ಲೆಯಲ್ಲಿ ಕೊರೊನಾ ಸೋಂಕು ದಿನೇ ದಿನೆ ಹೆಚ್ಚಾಗುತ್ತಿದ್ದು, ಭಾನುವಾರ ಕೂಡ 13 ಜನರಿಗೆ ಕೋವಿಡ್ ವೈರಸ್ ಹರಡಿದೆ. ಇಂದು ಓರ್ವ ಸಾವನ್ನಪ್ಪಿದ್ದಾರೆ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ಸತೀಶ್ ತಿಳಿಸಿದ್ದಾರೆ.
ಅರಸೀಕೆರೆ ನಿವಾಸಿ 77 ವರ್ಷದ ವೃದ್ಧ ಕಳೆದ ರಾತ್ರಿ ಮೃತಪಟ್ಟಿದ್ದಾರೆ. ನ್ಯುಮೋನಿಯಾ, ರಕ್ತದೊತ್ತಡ ಸೇರಿದಂತೆ ಇತರೆ ಸಮಸ್ಯೆಯಿಂದ ಬಳಲುತ್ತಿದ್ದ ಅವರು ಜುಲೈ 3 ರಂದು ಕೋವಿಡ್ ಆಸ್ಪತ್ರೆಗೆ ದಾಖಲಾಗಿದ್ದರು. ಅವರ ಗಂಟಲು ದ್ರವದ ಮಾದರಿಯನ್ನು ಪರೀಕ್ಷೆ ಮಾಡಲಾಗಿ, ಕೊರೊನಾ ಸೋಂಕು ತಗುಲಿರುವುದು ದೃಢಪಟ್ಟಿತ್ತು. ಚಿಕಿತ್ಸೆ ಫಲಕಾರಿಯಾಗದೇ ಕೊನೆಯುಸಿರೆಳೆದಿದ್ದಾರೆ. ಜಿಲ್ಲಾಡಳಿತದ ವತಿಯಿಂದ ಅವರ ಅಂತ್ಯಕ್ರಿಯೆ ನೆರವೇರಿಸಲಾಗಿದೆ.
ಜಿಲ್ಲೆಯಲ್ಲಿ ಈವರೆಗೆ ಕೊರೊನಾದಿಂದ ಒಟ್ಟು 8 ಜನ ಮೃತಪಟ್ಟಿದ್ದಾರೆ. ಹೊಸದಾಗಿ 13 ಪ್ರಕರಣಗಳು ವರದಿಯಾಗಿವೆ. ಅರಸೀಕೆರೆ ತಾಲೂಕಿನಲ್ಲಿ 5, ಚನ್ನರಾಯಪಟ್ಟಣದ 1 ಪ್ರಕರಣ, ಹಾಸನದಲ್ಲಿ 7 ಪ್ರಕರಣ ಸೇರಿ ಒಟ್ಟು 13 ಪಾಸಿಟಿವ್ ಬಂದಿವೆ. ಜಿಲ್ಲೆಯಲ್ಲಿ ಒಟ್ಟು 492 ಕೊರೊನಾ ಪಾಸಿಟಿವ್ ಪ್ರಕರಣಗಳು ದಾಖಲಾಗಿವೆ. ಇದರಲ್ಲಿ 255 ಜನರು ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಇನ್ನೂ 299 ಜನ ಚಿಕಿತ್ಸೆ ಪಡೆಯುತ್ತಿರುವುದಾಗಿ ಆರೋಗ್ಯಾಧಿಕಾರಿ ಡಾ. ಸತೀಶ್ ಮಾಹಿತಿ ನೀಡಿದರು.
ಹಾಸನ ಜಿಲ್ಲೆಯಲ್ಲಿ ತಾಲೂಕುವಾರು ಕೋವಿಡ್ ಪ್ರಕರಣಗಳು:
1. ಆಲೂರು - 20
2. ಅರಕಲಗೂಡು - 21
3. ಅರಸೀಕೆರೆ - 62