ಹಾಸನ :ಹಸಿರು ವಲಯದಲ್ಲಿರುವ ಜಿಲ್ಲೆಯಲ್ಲಿ ಲಾಕ್ಡೌನ್ ಸಡಿಲಿಕೆ ಮಾಡಲಾಗಿದೆ. ವಾರದ ಏಳು ದಿನಗಳೂ ಬೆಳಗ್ಗೆ 7ರಿಂದ ಸಂಜೆ 7ರವರೆಗೆ ಎಲ್ಲಾ ಚಟುವಟಿಕೆಗಳಿಗೆ ಅವಕಾಶ ನೀಡಲಾಗಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಶ್ರೀನಿವಾಸ್ ಗೌಡ ತಿಳಿಸಿದರು.
ಬೆಳಗ್ಗೆ 7ರಿಂದ ಸಂಜೆ 7ರವರೆಗೆ ಎಲ್ಲಾ ಚಟುವಟಿಕೆಗಳಿಗೆ ಅವಕಾಶ.. ಹಾಸನ ಎಸ್ಪಿ - ಹಾಸನ ಎಸ್ಪಿ
ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕಚೇರಿಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಜಿಲ್ಲೆಯಲ್ಲಿ ಲಾಕ್ಡೌನ್ ಜಾರಿಗೆ ಬಂದ ದಿನದಿಂದ ಈವರೆಗೂ ಯಶಸ್ವಿಯಾಗಿದ್ದು, ಕೊರೊನಾ ಪಾಸಿಟಿವ್ ಪ್ರಕರಣ ಕಂಡು ಬಂದಿಲ್ಲ.
![ಬೆಳಗ್ಗೆ 7ರಿಂದ ಸಂಜೆ 7ರವರೆಗೆ ಎಲ್ಲಾ ಚಟುವಟಿಕೆಗಳಿಗೆ ಅವಕಾಶ.. ಹಾಸನ ಎಸ್ಪಿ Opportunity for all activities from Hassan SP](https://etvbharatimages.akamaized.net/etvbharat/prod-images/768-512-7071244-181-7071244-1588680509523.jpg)
ಬೆಳಗ್ಗೆ 7ರಿಂದ ಸಂಜೆ 7ರ ವರೆಗೆ ಎಲ್ಲಾ ಚಟುವಟಿಕೆಗಳಿಗೆ ಅವಕಾಶ: ಹಾಸನ ಎಸ್ಪಿ..!
ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕಚೇರಿಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಜಿಲ್ಲೆಯಲ್ಲಿ ಲಾಕ್ಡೌನ್ ಜಾರಿಗೆ ಬಂದ ದಿನದಿಂದ ಈವರೆಗೂ ಯಶಸ್ವಿಯಾಗಿದ್ದು, ಕೊರೊನಾ ಪಾಸಿಟಿವ್ ಪ್ರಕರಣ ಕಂಡು ಬಂದಿಲ್ಲ. ಇಷ್ಟು ದಿನ ಹಸಿರು ಜಿಲ್ಲೆಯಾಗಿರುವಂತೆ ಮುಂದೆಯೂ ಕೂಡ ಪ್ರಕರಣ ದಾಖಲಾಗದಂತೆ ಸಾರ್ವಜನಿಕರು ಸಹಕರಿಸಬೇಕು ಎಂದರು.
ಮುಂದೆ ವಾರದ 7 ದಿನಗಳು ಕೂಡ ಎಲ್ಲಾ ಚಟುವಟಿಕೆಗಳು ನಡೆಯಲಿದೆ. ಮುಖಕ್ಕೆ ಮಾಸ್ಕ್ ಹಾಕಿಕೊಳ್ಳದೆ ಮನೆಯಿಂದ ಯಾರೂ ಬರಬಾರದು. ಸಾಮಾಜಿಕ ಅಂತರ ಕಾಪಾಡಿಕೊಳ್ಳಬೇಕು. ಏನೂ ಕೆಲಸವಿಲ್ಲದೆ ಪ್ರತಿ ದಿನ ಅನಗತ್ಯ ಹೊರಗೆ ಬರಬೇಡಿ ಎಂದು ಮನವಿ ಮಾಡಿದ್ದಾರೆ.