ಹಾಸನ :ಭಾರತದ ಭಾಷಾ ನೀತಿ ಮರು ಪರಿಶೀಲಿಸಿ ಕ್ರಮಕೈಗೊಳ್ಳುವಂತೆ ಆಗ್ರಹಿಸಿ ಕರ್ನಾಟಕ ರಕ್ಷಣಾ ವೇದಿಕೆ ನಾರಾಯಣಗೌಡ ಬಣದಿಂದ ಜಿಲ್ಲಾಧಿಕಾರಿ ಆರ್. ಗಿರೀಶ್ ಅವರಿಗೆ ಮನವಿ ಸಲ್ಲಿಸಲಾಯಿತು.
ಅಧಿಕೃತ ಭಾಷಾ ಕಾಯ್ದೆ ಹೆಸರಿನಲ್ಲಿ ಭಾರತೀಯರ ಮೇಲೆ ಹಿಂದಿ ಭಾಷೆಯನ್ನು ಬಲವಂತವಾಗಿ ಹೇರುವ ಕಾರ್ಯ ಸಂವಿಧಾನ ಜಾರಿಯಾದಾಗಿನಿಂದಲೂ ನಡೆದಿದೆ. ತಮ್ಮ ಸರ್ಕಾರದ ಅವಧಿಯಲ್ಲಿ ಇದು ಮುಂದುವರಿದಿದೆ.
ಪ್ರತಿ ವರ್ಷ ಸೆಪ್ಟೆಂಬರ್ ತಿಂಗಳಲ್ಲಿ ಹಿಂದಿ ಸಪ್ತಾಹ, ಹಿಂದಿ ಪಕ್ವಾಡಾದ ಹೆಸರಿನಲ್ಲಿ ಭಾರತದ ತೆರಿಗೆದಾರರ ಹಣದಿಂದ ಹಿಂದಿಯೇತರ ರಾಜ್ಯಗಳಲ್ಲಿ ಕಾರ್ಯಕ್ರಮಗಳನ್ನು ನಡೆಸಲಾಗುತ್ತಿದೆ ಎಂದು ದೂರಿದರು.
ಜಿಲ್ಲೆಯಲ್ಲಿ ಕೊರೊನಾ ಹೆಚ್ಚಾಗಿದ್ದರಿಂದ ಜಿಲ್ಲಾಡಳಿತ ಈ ಮಾಹಿತಿ ನೀಡಿದೆ.. ಸಂವಿಧಾನದ 8ನೇ ಪರಿಚ್ಛೇದದಲ್ಲಿರುವ ಎಲ್ಲಾ 22 ಭಾಷೆಗಳಿಗೂ ಸಮಾನ ಸ್ಥಾನಮಾನ ಇರಬೇಕು. ಆದರೆ, ಕೇಂದ್ರ ಸರ್ಕಾರದ ನೀತಿ ಇಡೀ ದೇಶದ ತುಂಬೆಲ್ಲಾ ಒಂದೇ ಭಾಷೆ ಇರಬೇಕು ಎಂಬಂತೆ ಕಾಣುತ್ತಿದೆ.
ಈ ನೀತಿಯಿಂದಾಗಿ ದೇಶದ ಭಾಷಾ ವೈವಿಧ್ಯಕ್ಕೆ ಧಕ್ಕೆಯಾಗುತ್ತದೆ. ದೇಶದ ಎಲ್ಲಾ ಭಾಷೆಗಳು ಜೀವಂತವಾಗಿರಬೇಕು. ಎಲ್ಲಾ ಭಾಷೆಗಳು ಬೆಳೆಯಬೇಕು ಎಂಬುದು ನಮ್ಮ ಸ್ಪಷ್ಟ ನಿಲುವು. ಹಿಂದಿ ಮತ್ತು ಇಂಗ್ಲಿಷ್ಗೆ ನೀಡಲಾಗಿರುವ ಮಾನ್ಯತೆ ಇತರೆ ಭಾಷೆಗಳಿಗೂ ನೀಡಬೇಕು ಎಂದು ಆಗ್ರಹಿಸಿದರು.