ಹಾಸನ:ಸಾಲ ನೀಡಿಲ್ಲ ಎಂಬ ಕಾರಣಕ್ಕೆ ಚಾಲಕನೋರ್ವ ಮಾಲೀಕನನ್ನು ಕೊಲೆ ಮಾಡಿರುವ ಘಟನೆ ಅರಸೀಕೆರೆ ತಾಲೂಕಿನ ಜಾವಗಲ್ನಲ್ಲಿ ನಡೆದಿದೆ.
ಸಾಲ ಕೊಡದ ಮಾಲೀಕನ ಬರ್ಬರ ಹತ್ಯೆ ಆರೋಪಿ ಅಂದರ್! ವಡ್ಡರಹಟ್ಟಿಯ ನಾಗೇಶ್ ಸಿದ್ಧಾಬೋವಿ(47) ಕೊಲೆಯಾದ ಮಾಲೀಕ. ಟ್ರ್ಯಾಕ್ಟರ್ ಚಾಲಕ ರಂಗಸ್ವಾಮಿ ಮಾಲೀಕರಾದ ನಾಗೇಶ್ ಬಳಿ 2 ಸಾವಿರ ರೂ. ಸಾಲ ಕೇಳಿದ್ದಾನೆ. ಇದೇ ವಿಚಾರವಾಗಿ ಇಬ್ಬರ ನಡುವೆ ಜಗಳ ಆರಂಭವಾಗಿದೆ.
ಮೊದಲು ಮೃತ ನಾಗೇಶ್, ರಂಗಸ್ವಾಮಿ ಮೇಲೆ ಕೈ ಮಾಡಿದ್ದಾನೆ. ಇದರಿಂದ ಕುಪಿತಗೊಂಡ ರಂಗಸ್ವಾಮಿ ಚೂಪಾದ ಹಾರೆಯಿಂದ ಮಾಲೀಕನ ಪಕ್ಕೆಲುಬಿಗೆ ಚುಚ್ಚಿದ್ದಾನೆ. ಇದರಿಂದ ತೀವ್ರವಾಗಿ ಗಾಯಗೊಂಡ ನಾಗೇಶ್, ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ ಎಂದು ತಿಳಿದು ಬಂದಿದೆ.
ಅರಸೀಕೆರೆ ತಾಲೂಕು ಜಾವಗಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಸದ್ಯ ಆರೋಪಿ ರಂಗಸ್ವಾಮಿಯನ್ನು ಪೊಲೀಸರು ಬಂಧಿಸಿದ್ದಾರೆ.