ಹಾಸನ:17ನೇಲೋಕಸಭೆಗೆ ನಡೆದ ಸಾರ್ವತ್ರಿಕ ಚುನಾವಣೆ ಜಿಲ್ಲೆಯಾದ್ಯಂತ ಶಾಂತಿಯುತವಾಗಿ ನಡೆದಿದೆ.
ಬೆಳಗ್ಗೆ 7 ಗಂಟೆಗೆ ಮತಗಟ್ಟೆಗಳಲ್ಲಿ ಮತದಾನ ಶುರುವಾಯಿತು. ಒಂಭತ್ತು ಗಂಟೆಯ ವೇಳೆಗೆ ಹೆಚ್ಚಿನ ಸಂಖ್ಯೆಯಲ್ಲಿ ಮತದಾರರು ಮತಗಟ್ಟೆಗಳಿಗೆ ಆಗಮಿಸಿದ್ದರಿಂದ ವೋಟಿಂಗ್ ಚುರುಕು ಪಡೆಯಿತು. ಬೆಳಗ್ಗೆ 9 ಗಂಟೆಯವರೆಗೆ ಕ್ಷೇತ್ರದಲ್ಲಿ ಶೇ.7.02 ರಷ್ಟು ಮತದಾನವಾದರೆ, 11 ಗಂಟೆಯ ಸುಮಾರಿಗೆ ಶೇ 23.31 ರಷ್ಟು ಮತದಾನವಾಗಿತ್ತು. ಮಧ್ಯಾಹ್ನ 1 ಗಂಟೆಯ ವೇಳೆಗೆ ಶೇ 43.49 ಮತದಾನವಾಗಿದೆ. ಮಧ್ಯಾಹ್ನ 3 ಗಂಟೆಗೆ ಶೇ.57.68 ಮತ ಚಲಾವಣೆಯಾಗಿದೆ. ಕ್ಷೇತ್ರದಲ್ಲಿ ನಡೆದ ಒಟ್ಟು ಮತದಾನದ ಪ್ರಮಾಣವನ್ನು ನಾಳೆ ಅಧಿಕೃತವಾಗಿ ಚುನಾವಣಾ ಆಯೋಗ ಬಿಡುಗಡೆ ಮಾಡಲಿದೆ.
ಪಡುವಲ ಹಿಪ್ಪೆಯಲ್ಲಿರುವ ಮತಗಟ್ಟೆಯೊಂದರಲ್ಲಿ ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡ ಮತದಾನ ಮಾಡಿದರು. ಸಚಿವ ಹೆಚ್.ಡಿ ರೇವಣ್ಣ, ಭವಾನಿ ರೇವಣ್ಣ ಹಾಗೂ ಲೋಕಸಭಾ ಕ್ಷೇತ್ರದ ಅಭ್ಯರ್ಥಿ ಪ್ರಜ್ವಲ್ ರೇವಣ್ಣ ಕೂಡಾ ಇಲ್ಲೇ ಮತ ಚಲಾಯಿಸಿದರು. ಬಿಜೆಪಿ ಅಭ್ಯರ್ಥಿ ಎ.ಮಂಜು ಹನ್ಯಾಳುವಿನಲ್ಲಿ ಮತ ಚಲಾಯಿಸಿದರು.