ಅರಕಲಗೂಡು: ತಾಲೂಕಿನಾದ್ಯಂತ ಜನರು ಕೊರೊನಾ ಸೋಂಕು ಸೇರಿದಂತೆ ವಿವಿಧ ರೀತಿಯ ಆರೋಗ್ಯ ಸಮಸ್ಯೆಗಳಿಂದ ನರಳುತ್ತಿದ್ದಾರೆ. ಇದರ ನಡುವೆ ಪಟ್ಟಣದ ಬೈಪಾಸ್ ರಸ್ತೆಯಲ್ಲಿರುವ ಗುಜರಿ ಅಂಗಡಿಗಳು ಜನರಿಗೆ ತಲೆನೋವಾಗಿ ಪರಿಣಮಿಸಿವೆ.
ಅರಕಲಗೂಡು: ಹಳೆಯ ಗುಜರಿ ಅಂಗಡಿಗಳ ತೆರವಿಗೆ ಒತ್ತಾಯ - ಅರಕಲಗೂಡಿನಲ್ಲಿ ಬೈ ಪಾಸ್ ರಸ್ತೆಯಲ್ಲಿರುವ ಗುಜರಿ ಅಂಗಡಿ ತೆರವಿಗೆ ಒತ್ತಾಯ
ಪಟ್ಟಣದ ಮುಖ್ಯ ರಸ್ತೆಯಲ್ಲಿಯೇ ಈ ಗುಜರಿ ಅಂಗಡಿಗಳು ಇರುವುದರಿಂದ ಪಟ್ಟಣದ ಸೌಂದರ್ಯ ಹಾಳಾಗುತ್ತಿದೆ ಎಂಬ ಆರೋಪವೂ ಕೇಳಿ ಬಂದಿದೆ. ಕೂಡಲೇ ಇಂತಹ ಸ್ವಚ್ಛತೆ ಕಾಯ್ದುಕೊಳ್ಳದ ಈ ಅಂಗಡಿಗಳನ್ನು ತೆರವುಗೊಳಿಸಬೇಕು ಎಂದು ಸಾರ್ವಜನಿಕರು ಆಗ್ರಹಿಸಿದ್ದಾರೆ.
ಹಳೆಯ ಗುಜರಿ ಅಂಗಡಿಗಳನ್ನು ತೆರವುಗೊಳಿಸುವಂತೆ ಒತ್ತಾಯ
ಗುಜರಿ ಅಂಗಡಿಗಳಲ್ಲಿ ಹಳೆಯ ಗುಜರಿ ಪದಾರ್ಥಗಳನ್ನು ಪಟ್ಟಣದ ಜನನಿಬಿಡ ರಸ್ತೆಯಲ್ಲಿ ತುಂಬಿಕೊಂಡಿದ್ದು, ಸಾರ್ವಜನಿಕರಿಂದ ತೀವ್ರ ಅಸಮಾಧಾನ ವ್ಯಕ್ತವಾಗಿದೆ. ಕಳೆದ ನಾಲ್ಕು ದಿನಗಳಿಂದ ನಿರಂತರವಾಗಿ ಮಳೆಯೂ ಸುರಿಯುತ್ತಿದ್ದು, ಇದರಿಂದ ಡೆಂಗ್ಯೂ ಇನ್ನಿತರೆ ರೋಗಗಳು ಹರಡುವ ಆತಂಕ ಸೃಷ್ಟಿಯಾಗಿದೆ. ಹೀಗಾಗಿ ಸ್ವಚ್ಛತೆ ಕಾಯ್ದುಕೊಳ್ಳದ ಅಂಗಡಿಗಳನ್ನು ತೆರವು ಮಾಡುವಂತೆ ಜನರು ಒತ್ತಾಯಿಸಿದ್ದಾರೆ.
TAGGED:
clearing old Gujari shops