ಹಾಸನ:ನಗರದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಬೆಣ್ಣೂರು ರೇಣುಕುಮಾರ್ ಅವರು, ಫೋನ್ ಕದ್ದಾಲಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜ್ಯ ಸರ್ಕಾರ ಸೂಕ್ತ ತನಿಖೆ ನಡೆಸಲು ತೀರ್ಮಾನಿಸಿದೆ. ಹಲವು ಹಿರಿಯ ಪೊಲೀಸರೂ ಇದರಲ್ಲಿ ಭಾಗಿಯಾಗಿರುವ ಶಂಕೆ ಇದೆ. ಈ ಹಿನ್ನೆಲೆಯಲ್ಲಿ ಹಿರಿಯ ಐಪಿಎಸ್ ಅಧಿಕಾರಿ ಅಲೋಕ್ ಕುಮಾರ್ ಅವರು ರಜೆ ಹಾಕಿ ತನಿಖೆಗೆ ಸಹಕರಿಸಬೇಕು ಎಂದರು.
ಫೋನ್ ಕದ್ದಾಲಿಕೆ ಪ್ರಕರಣ: ರಾಜ್ಯ ಬಿಜೆಪಿ ರೈತ ಮೋರ್ಚಾದಿಂದ ಸೂಕ್ತ ತನಿಖೆಗೆ ಆಗ್ರಹ - ರಾಜ್ಯ ಬಿಜೆಪಿ ರೈತ ಮೋರ್ಚಾ
ರಾಜ್ಯದಲ್ಲಿ ಫೋನ್ ಕದ್ದಾಲಿಕೆ ಪ್ರಕರಣ ಭಾರಿ ಸದ್ದು ಮಾಡುತ್ತಿದ್ದು, ಇದರಲ್ಲಿ ಭಾಗಿಯಾಗಿರುವ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಮತ್ತು ಹಲವು ಪೊಲೀಸ್ ಅಧಿಕಾರಿಗಳ ವಿರುದ್ಧ ಸೂಕ್ತ ತನಿಖೆ ಆಗಬೇಕು ಎಂದು ರಾಜ್ಯ ಬಿಜೆಪಿ ರೈತ ಮೋರ್ಚಾದ ಮುಖಂಡ ಬೆಣ್ಣೂರು ರೇಣುಕುಮಾರ್ ಆಗ್ರಹಿಸಿದ್ದಾರೆ.
ಬೆಣ್ಣೂರು ರೇಣುಕುಮಾರ್
ಕಾಂಗ್ರೆಸ್-ಜೆಡಿಎಸ್ ಸಮ್ಮಿಶ್ರ ಸರ್ಕಾರದಲ್ಲಿ ಈ ಫೋನ್ ಕದ್ದಾಲಿಕೆ ನಡೆದಿರುವುದು ಸಾಬೀತಾಗಿದೆ. ಆದ್ದರಿಂದ ನೈತಿಕ ಹೊಣೆ ಹೊತ್ತು ಮಾಜಿ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಅವರು ತಮ್ಮ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡುವ ಮೂಲಕ ಮೌಲ್ಯಯುತ ರಾಜಕಾರಣಕ್ಕೆ ಬೆಲೆ ಕೊಡಬೇಕು. ಫೋನ್ ಕದ್ದಾಲಿಕೆ ಪ್ರಕರಣ ನಿಜಕ್ಕೂ ಖಂಡನೀಯ. ಈ ಕುರಿತು ಸೂಕ್ತ ತನಿಖೆ ನಡೆಯಬೇಕೆಂದು ಆಗ್ರಹಿಸಿದರು.
ಪತ್ರಿಕಾಗೋಷ್ಠಿಯಲ್ಲಿ ಬಿಜೆಪಿ ಮುಖಂಡರಾದ ಪ್ರಕಾಶ್, ಚನ್ನಕೇಶವ, ನಾಗೇಶ್ ಸೇರಿದಂತೆ ಇನ್ನಿತರರು ಹಾಜರಿದ್ದರು.