ಕರ್ನಾಟಕ

karnataka

ETV Bharat / state

ಮಾದಕ ವಸ್ತುಗಳ ಅಪಾಯದಿಂದ ಯುವಕರನ್ನ ರಕ್ಷಿಸುವಂತೆ ಜಿಲ್ಲಾಡಳಿತಕ್ಕೆ ಮನವಿ - ಮಾದಕ ವಸ್ತುಗಳ ಸೇವನೆ ಸುದ್ದಿ

ಮಾದಕ ವಸ್ತುಗಳ ಬಳಕೆಯ ದುಷ್ಪರಿಣಾಮಗಳ ಕುರಿತು ಯುವಜನರಲ್ಲಿ ಜಾಗೃತಿ ಮೂಡಿಸುವ ಮತ್ತು ಶಾಲೆ ಕಾಲೇಜುಗಳಲ್ಲಿ ಮಾದಕ ವಸ್ತುಗಳ ಕರಾಳ ಹಸ್ತ ಚಾಚದಂತೆ ಎಚ್ಚರವಹಿಸಬೇಕಾಗಿದೆ. ವಿದ್ಯಾರ್ಥಿಗಳಿಗೆ ಮಾದಕ ವಸ್ತುಗಳ ಪೂರೈಕೆಯಾಗುತ್ತಿರುವುದು ಆತಂಕಕಾರಿ ಬೆಳವಣಿಗೆಯಾಗಿದೆ..

plea for dc to stop drug mafia
ಜಿಲ್ಲಾಡಳಿತಕ್ಕೆ ಮನವಿ

By

Published : Sep 11, 2020, 9:56 PM IST

ಹಾಸನ :ಸಮಾಜವನ್ನು ಮಾದಕ ವಸ್ತುಗಳ ಅಪಾಯದಿಂದ ರಕ್ಷಿಸಲು ಒತ್ತಾಯಿಸಿ ಶ್ರೀ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ ಸಿ ಟ್ರಸ್ಟ್‌ನ ಜಿಲ್ಲಾ ಜನಜಾಗೃತಿ ವೇದಿಕೆಯಿಂದ ಜಿಲ್ಲಾಡಳಿತಕ್ಕೆ ಮನವಿ ಸಲ್ಲಿಸಲಾಯಿತು.

ಜಿಲ್ಲಾಡಳಿತಕ್ಕೆ ಮನವಿ

ಸಮಾಜಕ್ಕೆ ಡ್ರಗ್ಸ್ ಪೂರೈಕೆ​, ಮಾದಕ ವಸ್ತುಗಳ ಸೇವನೆ, ಸಾಗಣೆ ಮತ್ತು ಪೂರೈಕೆಯಂತಹ ನೂರಾರು ಪ್ರಕರಣ ವರದಿಯಾಗುತ್ತಿರುವುದು ಕಳವಳಕಾರಿ. ಮಾದಕ ವಸ್ತುಗಳಿಗೆ ಸಂಬಂಧಿಸಿದ ಅಪರಾಧ ಪ್ರಕರಣಗಳನ್ನ ಗಂಭೀರವಾಗಿ ಪರಿಗಣಿಸಿ ಇದರ ನಿಯಂತ್ರಣಕ್ಕೆ ಸಂಬಂಧಿಸಿದಂತೆ ದಾಖಲಾಗುವ ಎಲ್ಲಾ ಪ್ರಕರಣಗಳ ನಿಷ್ಪಕ್ಷಪಾತ ತನಿಖೆ ನಡೆಸಬೇಕು ಮತ್ತು ಡ್ರಗ್ಸ್ ಜಾಲದಿಂದ ಸಮಾಜ ರಕ್ಷಿಸಬೇಕು ಎಂದರು. ​ ​ ​

ಮಾದಕ ವಸ್ತುಗಳ ಬಳಕೆಯ ದುಷ್ಪರಿಣಾಮಗಳ ಕುರಿತು ಯುವಜನರಲ್ಲಿ ಜಾಗೃತಿ ಮೂಡಿಸುವ ಮತ್ತು ಶಾಲೆ ಕಾಲೇಜುಗಳಲ್ಲಿ ಮಾದಕ ವಸ್ತುಗಳ ಕರಾಳ ಹಸ್ತ ಚಾಚದಂತೆ ಎಚ್ಚರವಹಿಸಬೇಕಾಗಿದೆ. ವಿದ್ಯಾರ್ಥಿಗಳಿಗೆ ಮಾದಕ ವಸ್ತುಗಳ ಪೂರೈಕೆಯಾಗುತ್ತಿರುವುದು ಆತಂಕಕಾರಿ ಬೆಳವಣಿಗೆಯಾಗಿದೆ. ಶಾಲಾ-ಕಾಲೇಜು ಆವರಣದ ಒಳಗೆ ಮತ್ತು ಹೊರಗೆ ಡ್ರಗ್ಸ್ ಅಪಾಯ ತಪ್ಪಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಳ್ಳುವಂತೆ ವೇದಿಕೆ ಆಗ್ರಹಿಸುತ್ತಿದೆ ಎಂದು ಹೇಳಿದರು.

ಸಾಂಸ್ಕೃತಿಕ ವಲಯದಲ್ಲಿ ಮಾದಕ ವಸ್ತುಗಳ ಬಳಕೆಯಾಗುತ್ತಿರುವುದು ದುರದೃಷ್ಟಕರ. ಅಂತರ್ಜಾಲ ಬಳಸಿ ಡ್ರಗ್ಸ್ ವ್ಯವಹಾರದ ಕಳ್ಳ ಸಾಗಾಣಿಕೆ ಮತ್ತು ಮಾರಾಟ ದಂಧೆ ನಡೆಯುತ್ತಿರುವ ಪ್ರಕರಣಗಳು ಬೆಳಕಿಗೆ ಬಂದಿವೆ. ಆದ್ದರಿಂದ ಸಿನಿಮಾ ಮತ್ತು ಸಾಂಸ್ಕೃತಿಕ ರಂಗದಲ್ಲಿ ಮಾದಕ ವಸ್ತುಗಳ ಮಾರಾಟ ಜಾಲದೊಂದಿಗೆ ನಂಟಿರುವವರನ್ನು ಸೂಕ್ತ ತನಿಖೆಗೊಳಪಡಿಸಿ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿ ಜಿಲ್ಲಾಡಳಿತಕ್ಕೆ ಮನವಿ ಸಲ್ಲಿಸಲಾಯಿತು.

ABOUT THE AUTHOR

...view details