ಕರ್ನಾಟಕ

karnataka

ETV Bharat / state

ಚೀನಾ ದಾಳಿ ಎದುರಿಸಲು ಭಾರತ ಸನ್ನದ್ಧ: ಸಚಿವ ಗೋಪಾಲಯ್ಯ - ಹೈಕಮಾಂಡ್ ನಿರ್ಧಾರ

ಮೋದಿ ವಿಶ್ವದ ನಾಯಕ. ಇಡೀ ಜಗತ್ತು ಅವರನ್ನು ಕೊಂಡಾಡುತ್ತಿದೆ ಎಂದು ಸಚಿವ ಗೋಪಾಲಯ್ಯ ಮೋದಿ ನಾಯಕತ್ವವನ್ನು ಹೊಗಳಿದರು. ಇದೇ ವೇಳೆ ವಿಧಾನ ಪರಿಷತ್ ಚುನಾವಣೆಗೆ ಅಭ್ಯರ್ಥಿಗಳ ಆಯ್ಕೆ ಬಗ್ಗೆ ಪ್ರತಿಕ್ರಿಯಿಸಿ, ಈ ಬಗ್ಗೆ ಮುಖ್ಯಮಂತ್ರಿಗಳು ಒಳ್ಳೇ ನಿರ್ಧಾರ ಕೈಗೊಳ್ಳಲಿದ್ದಾರೆ. ಕೋರ್ ಕಮಿಟಿಗೆ ಹಲವರ ಹೆಸರು ಬಂದಿದೆ. ಅಂತಿಮವಾಗಿ ಯಾರು ಅಭ್ಯರ್ಥಿ ಆಗಬೇಕೆಂದು ವರಿಷ್ಠರು ತೀರ್ಮಾನ ಮಾಡಲಿದ್ದಾರೆ ಎಂದರು.

minister gopalayya
minister gopalayya

By

Published : Jun 17, 2020, 2:43 PM IST

ಹಾಸನ: ಚೀನಾ ದಾಳಿ ಎದುರಿಸಲು ಭಾರತ ಸನ್ನದ್ಧವಾಗಿದ್ದು, ಪ್ರಧಾನಿ ನರೇಂದ್ರ ಮೋದಿಯವರು ಈ ಬಗ್ಗೆ ಚರ್ಚಿಸಿ ಸೂಕ್ತ ನಿರ್ಧಾರ ಮಾಡಲಿದ್ದಾರೆ ಎಂದು ಸಚಿವ ಗೋಪಾಲಯ್ಯ ವಿಶ್ವಾಸ ವ್ಯಕ್ತಪಡಿಸಿದ್ದಾರೆ.
ಹಾಸನದಲ್ಲಿ ಮಾತನಾಡಿದ ಅವರು, ಮೋದಿ ವಿಶ್ವದ ನಾಯಕ. ಇಡೀ ಜಗತ್ತು ಅವರನ್ನು ಕೊಂಡಾಡುತ್ತಿದೆ ಎಂದು ಮೋದಿ ನಾಯಕತ್ವವನ್ನು ಹೊಗಳಿದರು. ಇದೇ ವೇಳೆ ವಿಧಾನ ಪರಿಷತ್ ಚುನಾವಣೆಗೆ ಅಭ್ಯರ್ಥಿಗಳ ಆಯ್ಕೆ ಬಗ್ಗೆ ಪ್ರತಿಕ್ರಿಯಿಸಿ, ಈ ಬಗ್ಗೆ ಮುಖ್ಯಮಂತ್ರಿಗಳು ಒಳ್ಳೇ ನಿರ್ಧಾರ ಕೈಗೊಳ್ಳಲಿದ್ದಾರೆ. ಕೋರ್ ಕಮಿಟಿಗೆ ಹಲವರ ಹೆಸರು ಬಂದಿದೆ. ಅಂತಿಮವಾಗಿ ಯಾರು ಅಭ್ಯರ್ಥಿ ಆಗಬೇಕೆಂದು ವರಿಷ್ಠರು ತೀರ್ಮಾನ ಮಾಡಲಿದ್ದಾರೆ ಎಂದರು.

minister gopalayya
ಎಚ್. ವಿಶ್ವನಾಥ್, ಎಂಟಿಬಿ ನಾಗರಾಜ್ ಗೆ ಟಿಕೆಟ್ ನೀಡಲು ನನ್ನ ಬೆಂಬಲ ಇದೆ. ಸಣ್ಣಪುಟ್ಟ ಗೊಂದಲ ಇದ್ದರೂ ಇನ್ನೆರಡು ದಿನಗಳಲ್ಲಿ ಎಲ್ಲವೂ ತೀರ್ಮಾನವಾಗಲಿದೆ ಎಂದು ತಿಳಿಸಿದ್ದಾರೆ. ಎಸ್​ಎಸ್​ಎಲ್​ಸಿ ಮಕ್ಕಳು ಧೈರ್ಯವಾಗಿ ಪರೀಕ್ಷೆ ಬರೆಯಲಿ. ನಿಮ್ಮೊಂದಿಗೆ ಸರ್ಕಾರ ಇದೆ, ಪಾಲಕರು ಮಕ್ಕಳು ಆತಂಕಗೊಳ್ಳುವುದು ಬೇಡ ಎಂದು ಹೇಳಿದರು.ಹಾಸನ ಜಿಲ್ಲೆಗೆ ಕಳೆದ ಬಾರಿಯಂತೆ ಈ ಸಲವೂ ಉತ್ತಮ ಫಲಿತಾಂಶ ಬರಲಿದೆ ಎಂದು ಗೋಪಾಲಯ್ಯ ವಿಶ್ವಾಸ ವ್ಯಕ್ತಪಡಿಸಿದರು. ಪಡಿತರ ಅಕ್ಕಿ, ಸಕ್ಕರೆ ಶೇಖರಣೆ ಮಾಡಿರುವವರ ವಿರುದ್ಧ ಕ್ರಿಮಿನಲ್ ಕೇಸ್ ದಾಖಲಿಸುವುದಾಗಿ ಸಚಿವ ಗೋಪಾಲಯ್ಯ ಇದೇ ವೇಳೆ ಎಚ್ಚರಿಕೆ ನೀಡಿದರು.

ABOUT THE AUTHOR

...view details