ಹಾಸನ:ಅರಸೀಕೆರೆ ಬಳಿ ಪ್ರಯಾಣಿಕನೋರ್ವನನ್ನು ಹೆದರಿಸಿ ಅವನ ಬಳಿಯಿದ್ದ ಹಣ ಮತ್ತು ಚಿನ್ನಾಭರಣ ದೋಚಿ ಪರಾರಿಯಾಗಿದ್ದ ಆರೋಪಿಗಳನ್ನು ಅರಸೀಕೆರೆ ನಗರ ಠಾಣೆ ಪೊಲೀಸರು ಹೆಡೆಮುರಿ ಕಟ್ಟಿದ್ದಾರೆ.
ಅರುಣ್ ಕುಮಾರ್, ಕಿರಣ್‌ಕುಮಾರ್, ಹಾಗೂ ದರ್ಶನ್ ಬಂಧಿತ ಆರೋಪಿಗಳು. ಈ ಮೂವರು ಅರಸೀಕೆರೆಯ ಗಂಗಾನಗರ ಬಡಾವಣೆ ನಿವಾಸಿಗಳಾಗಿದ್ದಾರೆ.
ಹಾಸನ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ರಾಮ್‌ನಿವಾಸ್ ಸೆಪಟ್ ಮಾಧ್ಯಮಗೋಷ್ಟಿ ಈ ಕುರಿತು ಮಾಧ್ಯಮಗೋಷ್ಟಿಯಲ್ಲಿ ಮಾತನಾಡಿದ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ರಾಮ್‌ನಿವಾಸ್ ಸೆಪಟ್ ಅವರು, ಪ್ರಕರಣ ಕುರಿತು ಮಾಹಿತಿ ನೀಡಿದ್ರು. ಯಾವುದೋ ವಿಳಾಸ ಕೇಳುವ ನೆಪದಲ್ಲಿ ಅರಸೀಕೆರೆನಲ್ಲಿ ಕೆಲ ಅಪರಿಚಿತರು ಮಹೇಶ್‌ನನ್ನು ಪರಿಚಯ ಮಾಡಿಕೊಂಡು ರೈಲ್ವೆ ನಿಲ್ದಾಣದಿಂದ ಹೊರವಲಯಕ್ಕೆ ಕರೆದೊಯ್ದಿದ್ದರು. ಬಳಿಕ ಆತನಿಗೆ ಲಾಂಗ್, ಮಚ್ಚು ಮಾರಾಕಾಸ್ತ್ರಗಳನ್ನು ತೋರಿಸಿ ಬೆದರಿಸಿ ಹಣ, ಮೊಬೈಲ್, ಚಿನ್ನಾಭಾರಣ ಸೇರಿದಂತೆ ಸುಮಾರು ಒಂದೂವರೆ ಲಕ್ಷದ ಮೌಲ್ಯ ಬೆಲೆಬಾಳುವ ವಸ್ತುಗಳನ್ನು ದೋಚಿ ಪರಾರಿಯಾಗಿದ್ದರು.
ಈ ಸಂಬಂಧ ಅರಸೀಕೆರೆ ನಗರದ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದ ಪ್ರಕರಣದ ಬೆನ್ನತ್ತಿದ್ದ ನಗರ ಠಾಣೆ ನಿರೀಕ್ಷಕ ರಂಗಸ್ವಾಮಿ ಮತ್ತು ತಂಡ ಒಂದು ವಾರದೊಳಗೆ ಆರೋಪಿಗಳನ್ನು ಬಂಧಿಸಿದ್ದಾರೆ. ಆರೋಪಿಗಳಿಂದ ಕಳ್ಳತನವಾಗಿದ್ದ ವಸ್ತುಗಳು ಹಾಗೂ ಕೃತ್ಯಕ್ಕೆ ಬಳಸಿದ್ದ ಮಾರಕಾಸ್ತ್ರಗಳನ್ನು ವಶಪಡಿಸಿಕೊಂಡು ನ್ಯಾಯಾಲಯಕ್ಕೆ ಒಪ್ಪಿಸಲಾಗಿದೆ ಎಂದು ಎಸ್ಪಿ ಮಾಹಿತಿ ನೀಡಿದ್ರು.