ಹಾಸನ: ಕೇಂದ್ರ, ರಾಜ್ಯ ಸರ್ಕಾರಗಳ ಕೃಷಿ ಸಂಬಂಧಿತ ಮಸೂದೆಗಳ ವಿರುದ್ಧ ನಗರದಲ್ಲಿ ಪ್ರತಿಭಟನೆಗೆ ಮುಂದಾದ ವಿಧಾನಪರಿಷತ್ ಸದಸ್ಯ ಎಂ. ಎ. ಗೋಪಾಲಸ್ವಾಮಿ ಅವರನ್ನು ಪೊಲೀಸರು ವಶಕ್ಕೆ ಪಡೆದರು.
ಕರ್ನಾಟಕ ಬಂದ್: ಹಾಸನದಲ್ಲಿ ಪ್ರತಿಭಟನಾಕಾರರನ್ನು ವಶಕ್ಕೆ ಪಡೆದ ಪೊಲೀಸರು - Karnataka Band in Hassan
ಹಾಸನ ನಗರದಲ್ಲಿ ಸರ್ಕಾರದ ವಿರುದ್ಧ ಪ್ರತಿಭಟನೆ ನಡೆಸುತ್ತಿದ್ದ ವಿವಿಧ ಸಂಘಟನೆಗಳ ಮುಖಂಡರು ಮತ್ತು ಕಾರ್ಯಕರ್ತರನ್ನು ಪೊಲೀಸರು ವಶಕ್ಕೆ ಪಡೆದರು.
![ಕರ್ನಾಟಕ ಬಂದ್: ಹಾಸನದಲ್ಲಿ ಪ್ರತಿಭಟನಾಕಾರರನ್ನು ವಶಕ್ಕೆ ಪಡೆದ ಪೊಲೀಸರು Police detain protesters in Hassan](https://etvbharatimages.akamaized.net/etvbharat/prod-images/768-512-8968726-thumbnail-3x2-hrs.jpg)
ನಗರದ ಹೇಮಾವತಿ ಪ್ರತಿಮೆ ಬಳಿ ಹಲವು ಸಂಘಟನೆಗಳ ಸದಸ್ಯರು ಪ್ರತಿಭಟನೆ ನಡೆಸುತ್ತಿದ್ದರು. ಕಾಂಗ್ರೆಸ್ ವಿಧಾನಪರಿಷತ್ ಸದಸ್ಯ ಗೋಪಾಲಸ್ವಾಮಿ ಕೂಡ ಪ್ರತಿಭಟನೆಯಲ್ಲಿ ಭಾಗಿಯಾಗಿದ್ದರು. ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ ಪ್ರತಿಭಟನಾಕಾರರು, ಬೈಕ್ ರ‍್ಯಾಲಿ ನಡೆಸಿ, ಬಲವಂತವಾಗಿ ಅಂಗಡಿ - ಮುಂಗಟ್ಟುಗಳನ್ನು ಬಂದ್ ಮಾಡಲು ಮುಂದಾದರು. ಈ ವೇಳೆ ಎಂಎಲ್ಸಿ ಗೋಪಾಲಸ್ವಾಮಿ, ಸಿಐಟಿಯು ಜಿಲ್ಲಾಧ್ಯಕ್ಷ ಧರ್ಮೇಶ್, ಪ್ರಧಾನ ಕಾರ್ಯದರ್ಶಿ ನವೀನ್, ರೈತ ಮುಖಂಡ ಕೊಟ್ಟೂರು ಶ್ರೀನಿವಾಸ್ ಸೇರಿದಂತೆ ಸಂಘಟನೆಗಳ ಕಾರ್ಯಕರ್ತರನ್ನು ಪೊಲೀಸರು ವಶಕ್ಕೆ ಪಡೆದರು.
ಈ ವೇಳೆ, ಪ್ರತಿಭಟನಾಕಾರರು ಮತ್ತು ಪೊಲೀಸರ ನಡುವೆ ಮಾತಿನ ಚಕಮಕಿ ನಡೆದು ಕೆಲಕಾಲ ಸ್ಥಳದಲ್ಲಿ ಪರಿಸ್ಥಿತಿ ವಿಕೋಪಕ್ಕೆ ತಿರುಗಿತ್ತು. ಬಳಿಕ ಪೊಲೀಸರು ಪರಿಸ್ಥಿತಿಯನ್ನು ಹತೋಟಿಗೆ ತಂದರು.