ಚನ್ನರಾಯಪಟ್ಟಣ: ಪತ್ರಿಕಾ ದಿನಾಚರಣೆ ಅಂಗವಾಗಿ ಚನ್ನರಾಯಪಟ್ಟಣದ ತಾಲ್ಲೂಕು ಕಾರ್ಯನಿರತ ಪತ್ರಕರ್ತರ ಸಂಘದಿಂದ ಆಯೋಜಿಸಲಾಗಿದ್ದ ವಿವಿಧ ಕಾರ್ಯಕ್ರಮಗಳಿಗೆ ಶಾಸಕ ಸಿ.ಎನ್.ಬಾಲಕೃಷ್ಣ ಚಾಲನೆ ನೀಡಿದರು.
ಪತ್ರಕರ್ತರ ದಿನಾಚರಣೆ ಅಂಗವಾಗಿ ರಕ್ತದಾನ ಮಾಡುವ ಮೂಲಕ ವಿನೂತನವಾಗಿ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು. ಈ ವೇಳೆ ಮಹತ್ವದ ಸುಮಾರು 20 ಹಿಂದಿನ ಪತ್ರಿಕೆಗಳನ್ನು ಪ್ರದರ್ಶನಕ್ಕೆ ಇಡಲಾಯಿತು. ಸ್ವಯಂ ಪ್ರೇರಿತರಾಗಿ ಸಂಘ ಸಂಸ್ಥೆಗಳ ಜನರು ಬಂದು ರಕ್ತದಾನ ಮಾಡುವ ಮೂಲಕ ಕಾರ್ಯಕ್ರಮವನ್ನು ಅರ್ಥಪೂರ್ಣವಾಗಿಸಿದರು.