ಹಾಸನ: ಖಾಸಗಿ ಆಸ್ಪತ್ರೆಯವರು ದುಡ್ಡು ಮಾಡುತ್ತಿರುವುದು ಸಾಕು, ಅವರು ಹೇಳುವ ಕಥೆಯನ್ನು ಕೇಳುವುದು ಬಿಟ್ಟು ಕೊರೊನಾ ನಿಯಂತ್ರಣಕ್ಕಾಗಿ ಅವುಗಳನ್ನು ಜಿಲ್ಲಾಡಳಿತದ ನಿಯಂತ್ರಣಕ್ಕೆ ಸರ್ಕಾರ ನೀಡಲಿ ಎಂದು ಬಿಜೆಪಿ ಶಾಸಕ ಪ್ರೀತಮ್ ಗೌಡ ಒತ್ತಾಯಿಸಿದರು.
ನಗರದ ಅಂಬೇಡ್ಕರ್ ಭವನದಲ್ಲಿ ಉಸ್ತುವಾರಿ ಸಚಿವ ಗೋಪಾಲಯ್ಯ ಅಧ್ಯಕ್ಷತೆಯ ತುರ್ತು ಸಭೆಯಲ್ಲಿ ಮಾತನಾಡಿದ ಅವರು, ಖಾಸಗಿ ಆಸ್ಪತ್ರೆ ಆಡಳಿತ ಮಂಡಳಿ ಧೋರಣೆ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು. ಯಾವ ಖಾಸಗಿ ಆಸ್ಪತ್ರೆಗಳು ಕೊರೊನಾ ಸೋಂಕಿಗೆ ಚಿಕಿತ್ಸೆ ನೀಡುವುದಿಲ್ಲವೋ ಅಂತಹ ಆಸ್ಪತ್ರೆಗಳ ಲೈಸೆನ್ಸ್ ರದ್ದುಗೊಳಿಸುವಂತೆ ಆಗ್ರಹಿಸಿದರು.