ಕರ್ನಾಟಕ

karnataka

ETV Bharat / state

ಪ್ರಧಾನಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆ ಸಮರ್ಪಕ ಅನುಷ್ಠಾನಕ್ಕೆ ಸೂಚನೆ

ಜಿಲ್ಲಾಧಿಕಾರಿ ಕಚೇರಿಯಲ್ಲಿ ಜಿಲ್ಲಾ ಪ್ರಗತಿ ಪರಿಶೀಲನಾ ಸಭೆ ನಡೆದಿದ್ದು, ಪ್ರಧಾನಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆ ಸಮರ್ಪಕವಾಗಿ ಜಿಲ್ಲೆಯಲ್ಲಿ ಅನುಷ್ಠಾನಗೊಳಿಸಲು ಕೃಷಿ ಇಲಾಖೆ ಅಧಿಕಾರಿಗಳಿಗೆ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ನವೀನ್ ರಾಜ್ ಸಿಂಗ್ ನಿರ್ದೇಶನ ನೀಡಿದ್ದಾರೆ.

hassan
ಪ್ರಗತಿ ಪರಿಶೀಲನಾ ಸಭೆ

By

Published : Feb 4, 2020, 9:42 AM IST

ಹಾಸನ: ಪ್ರಧಾನಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆಯನ್ನು ಜಿಲ್ಲೆಯಲ್ಲಿ ಸಮರ್ಪಕವಾಗಿ ಅನುಷ್ಠಾನಗೊಳಿಸಲು ಕೃಷಿ ಇಲಾಖೆ ಅಧಿಕಾರಿಗಳಿಗೆ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ನವೀನ್ ರಾಜ್ ಸಿಂಗ್ ನಿರ್ದೇಶನ ನೀಡಿದ್ದಾರೆ.

ಜಿಲ್ಲಾಧಿಕಾರಿ ಕಚೇರಿಯಲ್ಲಿ ಜಿಲ್ಲಾ ಪ್ರಗತಿ ಪರಿಶೀಲನಾ ಸಭೆ ನಡೆಸಿ ಮಾತನಾಡಿದ ಅವರು, ಪಿಎಂ ಕಿಸಾನ್ ಯೋಜನೆಯಡಿ ನಿಗದಿಪಡಿಸಿರುವ ಗುರಿಯಲ್ಲಿ ಇರುವ ಅಂಕಿ-ಅಂಶಗಳನ್ನು ಗ್ರಾಮವಾರು ಮರು ಪರಿಶೀಲಿಸಿ ಸರಿಪಡಿಸುವಂತೆ ಸೂಚನೆ ನೀಡಿದರು. ಕೃಷಿ, ತೋಟಗಾರಿಕೆ ಮೂಲಕ ರೈತರ ವೈಯಕ್ತಿಕ ಜಮೀನುಗಳಲ್ಲಿ ಉದ್ಯೋಗ ಖಾತ್ರಿ ಯೋಜನೆಯಡಿ ಹೆಚ್ಚಿನ ಉದ್ಯೋಗ ಸೃಷ್ಟಿ ಮಾಡಿ ಕೃಷಿ ಹೊಂಡ ಸೇರಿದಂತೆ ಇತರೆ ಜಲಸಂರಕ್ಷಣಾ ಕಾರ್ಯಗಳನ್ನು ಕೈಗೊಳ್ಳಿ ಎಂದು ಸೂಚನೆ ನೀಡಿದ್ದಾರೆ.

ಜಿಲ್ಲಾಧಿಕಾರಿ ಕಚೇರಿಯಲ್ಲಿ ಪ್ರಗತಿ ಪರಿಶೀಲನಾ ಸಭೆ

ಜಿಲ್ಲೆಯಲ್ಲಿ ಡಿಸೆಂಬರ್‌ನಿಂದ ಮೇವರೆಗೆ ಕೃಷಿ ಚಟುವಟಿಕೆಗಳು ಕುಂಠಿತವಾಗುತ್ತಿವೆ. ಆ ಅವಧಿಯಲ್ಲಿ ಪರ್ಯಾಯವಾಗಿ ಮೂರು ತಿಂಗಳ ಬೆಳೆಯನ್ನು ರೈತರಿಗೆ ಪರಿಚಯಿಸುವ ನಿಟ್ಟಿನಲ್ಲಿ ಕೃಷಿ ಇಲಾಖೆ ಅಧಿಕಾರಿಗಳು ಗಮನ ಹರಿಸಬೇಕು. ಕೃಷಿ ಕಾಲೇಜುಗಳೊಂದಿಗೆ ಈ ಬಗ್ಗೆ ಅಧ್ಯಯನ ನಡೆಸಿ ರೈತರಿಗೆ ನೆರವಾಗಬೇಕೆಂದು ಸೂಚಿಸಿದ್ದಾರೆ. ಉದ್ಯೋಗ ಖಾತ್ರಿ ಯೋಜನೆಯಡಿ ಕೂಲಿ ಹಾಗೂ ಸಾಮಾಗ್ರಿ ಅನುಪಾತವನ್ನು ಸರಿಯಾಗಿ ನಿರ್ವಹಿಸುವ ಮೂಲಕ ಕಾರ್ಮಿಕರಿಗೆ ಹಾಗೂ ಕಾಮಗಾರಿ ಪ್ರಗತಿಗೆ ಹಿನ್ನಡೆಯಾಗದಿರಲಿ ಎಂದು ಅಧಿಕಾರಿಗಳಿಗೆ ಹೇಳಿದರು.

ಈ ಸಂದರ್ಭದಲ್ಲಿ ಜಿಲ್ಲಾಧಿಕಾರಿ ಆರ್. ಗಿರೀಶ್ ಮಾತನಾಡಿ, ಫಲಾನುಭವಿ ರೈತರ ನಿಖರ ಸಂಖ್ಯೆ ಗುರುತಿಸುವುದಕ್ಕೆ ಸಂಬಂಧಿಸಿದಂತೆ ಭೂಮಿ ಯೋಜನೆಯಡಿ ಇರುವ ದಾಖಲೆಗಳನ್ನು ಬಳಸಿಕೊಳ್ಳುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದರು.

ABOUT THE AUTHOR

...view details