ಹಾಸನ:ತಾಲೂಕು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಪ್ರಸನ್ನಕುಮಾರ್ ನೇತೃತ್ವದಲ್ಲಿ ಜಮಾಯಿಸಿದ ಅಪಾರ ಕಾರ್ಯಕರ್ತರು, ಹೊಳೆನರಸೀಪುರ- ಹಾಸನ ಮಾರ್ಗದ ರಸ್ತೆ ತಡೆದು ಟೈರ್ ಸುಟ್ಟು ಬಿಜೆಪಿ ವಿರುದ್ದ ಘೋಷಣೆ ಕೂಗಿದರು.
ಡಿ ಕೆ ಶಿವಕುಮಾರ್ ಬಂಧನ ವಿರೋಧಿಸಿ ಹಾಸನದಲ್ಲಿ ಪ್ರತಿಭಟನೆ.. - ಕಾಂಗ್ರೆಸ್ ಕಾರ್ಯಕರ್ತರು
ಕಾಂಗ್ರೆಸ್ ನಾಯಕ ಡಿ ಕೆ ಶಿವಕುಮಾರ್ ಬಂಧನ ಖಂಡಿಸಿ ಕಾಂಗ್ರೆಸ್ ಕಾರ್ಯಕರ್ತರು ಹಾಸನದಲ್ಲಿ ಪ್ರತಿಭಟನೆ ನಡೆಸಿದರು.

ಕೇಂದ್ರದ ಬಿಜೆಪಿ ಸರ್ಕಾರ ಇಡಿ ಅಧಿಕಾರಿಗಳನ್ನು ದುರ್ಬಳಕೆ ಮಾಡಿಕೊಂಡು ಕಾಂಗ್ರೆಸ್ ನಾಯಕರಿಗೆ ಭಾರಿ ಕಿರುಕುಳ ನೀಡಲಾಗುತ್ತಿದೆ. ಕಳೆದ ವರ್ಷ ಗುಜರಾತ್ ರಾಜ್ಯಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಪರ ದುಡಿದ ಶಿವಕುಮಾರ್ ಅವರ ಮೇಲೆ ರಾಜಕೀಯ ಸೇಡು ತೀರಿಸಿಕೊಳ್ಳುವ ಸಲುವಾಗಿ ಬಿಜೆಪಿ ಈಗ ಇಡಿ ಅಧಿಕಾರಿಗಳ ಮೂಲಕ ಡಿಕೆಶಿ ಅವರನ್ನು ಬಂಧಿಸಿ ನೀಚ ಕೆಲಸಕ್ಕೆ ಕೈ ಹಾಕಿದೆ ಎಂದು ಕಾರ್ಯಕರ್ತರು ಆಕ್ರೋಶ ವ್ಯಕ್ತಪಡಿಸಿದರು.
ಕಾಂಗ್ರೆಸ್ ನಾಯಕರನ್ನು ಬಂಧಿಸಿದರೆ ಇಂತಹ ಕುಚೋದ್ಯಗಳಿಗೆಲ್ಲಾ ಪಕ್ಷದ ಕಾರ್ಯಕರ್ತರು ಹೆದರುವುದಿಲ್ಲ. ಜೈಲಿನಿಂದಲೇ ಹೋರಾಟ ಶುರು ಮಾಡಿದ ಕಾಂಗ್ರೆಸ್ ಕಾರ್ಯಕರ್ತರು ಬಿಜೆಪಿ ಷಡ್ಯಂತ್ರಗಳಿಗೆ ಬಗ್ಗುವ ಜಾಯಮಾನ ಹೊಂದಿಲ್ಲ ಎಂದರು.