ಕರ್ನಾಟಕ

karnataka

ETV Bharat / state

ಹಥ್ರಾಸ್​ ಅತ್ಯಾಚಾರ ಪ್ರಕರಣ: ಹಾಸನದಲ್ಲಿ ಕರ್ನಾಟಕ ದಲಿತ ಸಂಘರ್ಷ ಸಮಿತಿ ಪ್ರತಿಭಟನೆ - ಹಥ್ರಾಸ್​ ಅತ್ಯಾಚಾರ ಪ್ರಕರಣದ ವಿರುದ್ಧ ಪ್ರತಿಭಟನೆ

ಉತ್ತರಪ್ರದೇಶದ ಹಥ್ರಾಸ್​​ನಲ್ಲಿ ನಡೆದ ಯುವತಿ ಅತ್ಯಾಚಾರ ಪ್ರಕರಣ ಖಂಡಿಸಿ ಹಾಸನದಲ್ಲಿ ಪ್ರತಿಭಟನೆ ನಡೆಸಲಾಯ್ತು.ಅತ್ಯಾಚಾರ ಎಸಗಿರುವವರನ್ನು ಬಂಧಿಸಿ, ಕಠಿಣ ಶಿಕ್ಷೆ ವಿಧಿಸುವಂತೆ ಪ್ರತಿಭಟನಾಕಾರರು ಆಗ್ರಹಿಸಿದರು.

protest against Hatras rape case
ಪ್ರತಿಭಟನೆ

By

Published : Oct 6, 2020, 10:21 AM IST

ಹಾಸನ: ಉತ್ತರಪ್ರದೇಶದಲ್ಲಿ ದಲಿತ ಯುವತಿ ಮೇಲೆ ಸಾಮೂಹಿಕ ಅತ್ಯಾಚಾರ ಮತ್ತು ಕೊಲೆ ಖಂಡಿಸಿ ಕರ್ನಾಟಕ ದಲಿತ ಸಂಘರ್ಷ ಸಮಿತಿಯಿಂದ ಜಿಲ್ಲಾಧಿಕಾರಿ ಕಚೇರಿ ಮುಂದೆ ಪ್ರತಿಭಟನೆ ನಡೆಸಿ ಜಿಲ್ಲಾಧಿಕಾರಿ ಆರ್.ಗಿರೀಶ್ ಅವರಿಗೆ ಮನವಿ ಸಲ್ಲಿಸಲಾಯಿತು.

ಪ್ರತಿಭಟನೆ
​ಯುವತಿ ಮೇಲೆ ಅತ್ಯಾಚಾರ ನಡೆದು ಸಾವಿಗೀಡಾದರೂ ಶವವನ್ನು ಕೂಡ ಕೊಡದೆ ಮುಖವನ್ನು ನೋಡಲು ಬಿಡದಂತಹ ವ್ಯವಸ್ಥೆ ಉತ್ತರಪ್ರದೇಶದಲ್ಲಿರುವುದು ಖಂಡನೀಯ. ಯೋಗಿ ಆದಿತ್ಯನಾಥ್ ಸರ್ಕಾರ ರಾಮರಾಜ್ಯದ ಕನಸು ಕಂಡಿರುವುದು ಇದೇನಾ ಎಂದು ಪ್ರಶ್ನೆ ಮಾಡಿದರು. 'ಯಾವ ಹೆಣ್ಣು ಮಗಳು ಮಧ್ಯರಾತ್ರಿಯಲ್ಲಿ ಒಂಟಿಯಾಗಿ ನಡೆಯುತ್ತಾಳೆ ಅಂದು ದೇಶಕ್ಕೆ ಸ್ವಾತಂತ್ರ್ಯ ಸಿಗುತ್ತೆ' ಎಂದು ಮಹಾತ್ಮ ಗಾಂಧೀಜಿ ಹೇಳಿದ್ರು. ಆದರೆ ಇವತ್ತು ಹಗಲಿನ ವೇಳೆಯಲ್ಲಿಯೇ ಹೆಣ್ಣು ಮಕ್ಕಳ ಮೇಲೆ ಅತ್ಯಾಚಾರ, ಕೊಲೆಯಂತಹ ಘಟನೆಗಳು ನಡೆಯುತ್ತಿವೆ ಎಂದು ಆತಂಕ ವ್ಯಕ್ತಪಡಿಸಿದರು. ಉತ್ತರಪ್ರದೇಶ ಸರ್ಕಾರ ಅಪರಾಧ ಎಸಗಿರುವ ದುಷ್ಕರ್ಮಿಗಳ ವಿರುದ್ಧ ಕ್ರಮಕ್ಕೆ ಮುಂದಾಗದಿರುವುದು. ಸಾಮಾನ್ಯ ಜನರಿಗೆ ರಕ್ಷಣೆ ಇಲ್ಲದಂತಾಗಿದೆ. ಹೀಗಾಗಿ ಅತ್ಯಾಚಾರ ಎಸಗಿರುವವರನ್ನು ಬಂಧಿಸಿ ಕಠಿಣ ಶಿಕ್ಷೆ ವಿಧಿಸುವಂತೆ ಆಗ್ರಹಿಸಿದರು.

ABOUT THE AUTHOR

...view details