ಹಾಸನ: ತೆಲಂಗಾಣದ ಹೈದರಾಬಾದ್ನಲ್ಲಿ ನಡೆದ ಪಶು ವೈದ್ಯೆ ಮೇಲಿನ ಅತ್ಯಾಚಾರ ಹಾಗೂ ಹತ್ಯೆ ಪ್ರಕರಣ ಖಂಡಿಸಿ ನಗರದಲ್ಲಿ ಸ್ಪಂದನಾ ಸಿರಿ ವೇದಿಕೆ ನೇತೃತ್ವದಲ್ಲಿ ವಿವಿಧ ಮಹಿಳಾ ಸ್ವಯಂಸೇವಾ ಸಂಸ್ಥೆ ಮತ್ತು ಸಂಘಟನೆಗಳಿಂದ ಪ್ರತಿಭಟನೆ ನಡೆಸಿ ಜಿಲ್ಲಾಡಳಿತಕ್ಕೆ ಮನವಿ ಸಲ್ಲಿಸಲಾಯಿತು.
ಪಶು ವೈದ್ಯೆ ಮೇಲೆ ಅತ್ಯಾಚಾರವೆಸಗಿ ಕೊಲೆ: ಪ್ರಕರಣ ಖಂಡಿಸಿ ಹಾಸನದಲ್ಲಿ ಪ್ರತಿಭಟನೆ - ಪಶು ವೈದ್ಯೆ ಅತ್ಯಾಚಾರ ಪ್ರಕರಣ ಖಂಡಿಸಿ ಪ್ರತಿಭಟನೆ
ತೆಲಂಗಾಣದ ಹೈದರಾಬಾದ್ನಲ್ಲಿ ನಡೆದ ಪಶು ವೈದ್ಯೆ ಮೇಲಿನ ಅತ್ಯಾಚಾರ ಹಾಗೂ ಹತ್ಯೆ ಪ್ರಕರಣ ಖಂಡಿಸಿ ಹಾಸನದಲ್ಲಿ ಸ್ಪಂದನಾ ಸಿರಿ ವೇದಿಕೆ ನೇತೃತ್ವದಲ್ಲಿ ವಿವಿಧ ಮಹಿಳಾ ಸ್ವಯಂಸೇವಾ ಸಂಸ್ಥೆ ಮತ್ತು ಸಂಘಟನೆಗಳಿಂದ ಪ್ರತಿಭಟನೆ ನಡೆಯಿತು.
ನಗರದ ಹೇಮಾವತಿ ಪ್ರತಿಮೆ ಬಳಿಯಿಂದ ಹೊರಟ ಪ್ರತಿಭಟನಾ ಮೆರವಣಿಗೆಯು ಎನ್.ಆರ್. ವೃತ್ತದ ಮೂಲಕ ಜಿಲ್ಲಾಧಿಕಾರಿ ಕಚೇರಿ ಆವರಣ ತಲುಪಿತು. ವೈದ್ಯೆ ಮೇಲೆ ಅತ್ಯಾಚಾರ ನಡೆಸಿ ಬರ್ಬರವಾಗಿ ಸುಟ್ಟು ಹಾಕಿರುವ ಆರೋಪಿಗಳಿಗೆ ಉಗ್ರ ಶಿಕ್ಷೆಯಾಗಬೇಕು. ಆರೋಪಿಗಳಿಗೆ ರಸ್ತೆಯಲ್ಲಿ ಕಲ್ಲು ಹೊಡೆದು ಶಿಕ್ಷಿಸಬೇಕು ಎಂದು ಪ್ರತಿಭಟನಾನಿರತರು ಆಕ್ರೋಶ ವ್ಯಕ್ತಪಡಿಸಿದರು.
ಮಹಿಳೆ ಮೇಲೆ ಅತ್ಯಾಚಾರ ನಡೆದಾಗ ಆರೋಪಿಗೆ ಕಠಿಣ ಶಿಕ್ಷೆ ವಿಧಿಸಬೇಕು. ಸಮಾಜದಲ್ಲಿ ಕಾನೂನು, ನ್ಯಾಯಾಲಯಗಳಿವೆ. ಆದರೆ ಅದನ್ನು ಹೊರತುಪಡಿಸಿ ಪುರುಷರಲ್ಲಿ ಜವಾಬ್ದಾರಿ ಬರಬೇಕು. ಹೆಣ್ಣು ಎಂದರೆ ಏನು? ಆಕೆಯ ಸ್ಥಾನಮಾನ ಏನು? ಆಕೆ ಕೇವಲ ಲೈಂಗಿಕ ಕ್ರಿಯೆಗೆ ಮಾತ್ರ ಸೀಮಿತವಲ್ಲ ಎಂಬುದರ ಬಗ್ಗೆ ಅರಿವು ಮೂಡಿಸಬೇಕಿದೆ ಎಂದು ಸ್ಪಂದನ ಸಿರಿ ವೇದಿಕೆಯ ಹಾಸನ ಜಿಲ್ಲಾ ಮಹಿಳಾ ಸ್ವಯಂಸೇವಾ ಸಂಸ್ಥೆ ಅಧ್ಯಕ್ಷೆ ಸುಮಾ ಆಗ್ರಹಿಸಿದರು.
TAGGED:
protest against rape case