ಹಾಸನ: ವಿಶ್ವವಿಖ್ಯಾತ ಬೇಲೂರಿನ ಚನ್ನಕೇಶವ ರಥೋತ್ಸವ ವೇಳೆ ಕುರಾನ್ ಪಠಣ ಮಾಡದಂತೆ ಹಿಂದೂಪರ ಸಂಘಟನೆಯ ಕಾರ್ಯಕರ್ತರು ಮಂಗಳವಾರ ರಸ್ತೆಗಿಳಿದು ಪ್ರತಿಭಟನೆ ಮಾಡಿದರು. ಈ ವೇಳೆ ಬೈಕಿನಲ್ಲಿ ಆಗಮಿಸಿದ ಯುವಕನೋರ್ವ ಘೋಷಣೆ ಕೂಗಿದ್ದರಿಂದ ಗೊಂದಲದ ವಾತಾವರಣ ಉಂಟಾಗಿತ್ತು.
ಬೇಲೂರಿನ ಚನ್ನಕೇಶವ ರಥೋತ್ಸವದ ವೇಳೆ ಕುರಾನ್ ಪಠಣ ಮಾಡುವುದು ಮೊದಲಿನಿಂದಲೂ ರೂಢಿಯಲ್ಲಿರುವ ಸಂಪ್ರದಾಯ. ಆದ್ರೆ ಈ ಬಾರಿ ಎಪ್ರಿಲ್ 4 ಮತ್ತು ಎಪ್ರಿಲ್ 5ರಂದು ನಡೆಯಲಿರುವ ಚನ್ನಕೇಶವ ರಥೋತ್ಸವ ವೇಳೆ ಕುರಾನ್ ಪಠಣ ಮಾಡದಂತೆ ಹಿಂದೂ ಸಂಘಟನೆಗಳು ಪಟ್ಟು ಹಿಡಿದಿವೆ. ಈ ಸಂಬಂಧ ಹಿಂದೂಪರ ಸಂಘಟನೆಯ ನೂರಾರು ಕಾರ್ಯಕರ್ತರು ಮಂಗಳವಾರ ಬೇಲೂರಿನ ದೇವಾಲಯ ರಸ್ತೆಯಲ್ಲಿ ಪ್ರತಿಭಟನೆ ನಡೆಸಿದರು. ಈ ವೇಳೆ ಬೈಕ್‌ನಲ್ಲಿ ಬಂದ ಯುವಕ ಘೋಷಣೆ ಕೂಗಿದ್ದನು. ಇದರಿಂದ ಪ್ರತಿಭಟನಾಕಾರರು ಮತ್ತು ಯುವಕನ ಮಧ್ಯೆ ವಾಗ್ವಾದ ನಡೆದು, ಕೆಲಕಾಲ ಬಿಗುವಿನ ವಾತಾವರಣ ನಿರ್ಮಾಣವಾಗಿತ್ತು. ಪರಿಸ್ಥಿತಿ ನಿಯಂತ್ರಿಸಲು ಲಘು ಲಾಠಿ ಪ್ರಹಾರ ನಡೆಸಿದರು.