ಕರ್ನಾಟಕ

karnataka

ETV Bharat / state

ಸಹಾಯಕ ಪ್ರಾಧ್ಯಾಪಕರ ನೇಮಕಾತಿ ಅಧಿಸೂಚನೆ ರದ್ದುಪಡಿಸಲು ಆಗ್ರಹಿಸಿ ಪ್ರತಿಭಟನೆ

ಸಹಾಯಕ ಪ್ರಾಧ್ಯಾಪಕರ ನೇಮಕಾತಿ ಅಧಿಸೂಚನೆ ರದ್ದುಪಡಿಸಿ, ಸೇವೆಯಲ್ಲಿರುವ ಅತಿಥಿ ಉಪನ್ಯಾಸಕರಿಗೆ ಉದ್ಯೋಗ ಭದ್ರತೆ ಖಾಯಂಗೊಳಿಸಲು ಆಗ್ರಹಿಸಿ ಪದವಿ ಕಾಲೇಜುಗಳ ಅತಿಥಿ ಉಪನ್ಯಾಸಕರು ಕೆ.ಆರ್.ಎಸ್. ಸಂಘಟನೆ ಹಾಗೂ ಎಸ್.ಎಫ್.ಐ. ಸಂಘಟನೆಯ ಬೆಂಬಲದಲ್ಲಿ ಡಿಸಿ ಕಚೇರಿ ಮುಂದೆ ಪ್ರತಿಭಟನೆ ನಡೆಸಿದರು. ​ ​ ​ ​

Protests by guest lecturers
ಹಾಸನ ಪ್ರತಿಭಟನೆ

By

Published : Aug 25, 2020, 5:50 PM IST

ಹಾಸನ: ಸಹಾಯಕ ಪ್ರಾಧ್ಯಾಪಕರ ನೇಮಕಾತಿ ಅಧಿಸೂಚನೆ ರದ್ದುಪಡಿಸಿ, ಸೇವೆಯಲ್ಲಿರುವ ಅತಿಥಿ ಉಪನ್ಯಾಸಕರಿಗೆ ಉದ್ಯೋಗ ಭದ್ರತೆ ಖಾಯಂಗೊಳಿಸಲು ಆಗ್ರಹಿಸಿ ಕಳೆದ 8 ವಾರಗಳಿಂದಲೂ ಸರ್ಕಾರಿ ಹೋರಾಟ ನಡೆಸುತ್ತಿದ್ದು, ಪದವಿ ಕಾಲೇಜುಗಳ ಅತಿಥಿ ಉಪನ್ಯಾಸಕರು ಕೆ.ಆರ್.ಎಸ್. ಸಂಘಟನೆ ಹಾಗೂ ಎಸ್.ಎಫ್.ಐ. ಸಂಘಟನೆಯ ಬೆಂಬಲದಲ್ಲಿ ಡಿಸಿ ಕಚೇರಿ ಮುಂದೆ ಪ್ರತಿಭಟನೆ ನಡೆಸಿದರು.​ ​ ​ ​

​ರಾಜ್ಯದ 412 ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿ 14,564 ಅತಿಥಿ ಉಪನ್ಯಾಸಕರು ಕನಿಷ್ಠ ವೇತನ ಪಡೆದು ಅನೇಕ ವರ್ಷಗಳಿಂದ ಸೇವೆ ಸಲ್ಲಿಸುತ್ತಾ ಬಂದಿದ್ದೇವೆ. ಕೋವಿಡ್ ಸಂಕಷ್ಟದ ಈ ದಿನಗಳಲ್ಲಿ 4 ತಿಂಗಳುಗಳಿಂದ ವೇತನವಿಲ್ಲದೆ ತೀವ್ರ ಸಂಕಷ್ಟ ಎದುರಿಸುತ್ತಿದ್ದೇವೆ. ಈ ಮಧ್ಯೆ ಗಾಯದ ಮೇಲೆ ಬರೆ ಎಂಬಂತೆ ಕಾಲೇಜು ಶಿಕ್ಷಣ ಇಲಾಖೆ ಹೊಸದಾಗಿ ಸಹಾಯಕ ಪ್ರಾಧ್ಯಾಪಕರ ನೇಮಕಾತಿಗೆ ಜುಲೈ 7 ರಂದು ಅಧಿಕೃತ ಗೆಜೆಟ್ ನೋಟಿಫಿಕೇಷನ್ ಹೊರಡಿಸಿದೆ. ಇದರಿಂದ 2,400 ಕ್ಕೂ ಹೆಚ್ಚು ಅತಿಥಿ ಉಪನ್ಯಾಸಕರು ಕೆಲಸ ಕಳೆದುಕೊಳ್ಳುವ ಆತಂಕದಲ್ಲಿದ್ದೇವೆ ಎಂದರು.

ಕೆ.ಆರ್.ಎಸ್. ಸಂಘಟನೆ ಹಾಗೂ ಎಸ್.ಎಫ್.ಐ. ಸಂಘಟನೆಯ ಬೆಂಬಲದೊಂದಿಗೆ ಡಿಸಿ ಕಚೇರಿ ಮುಂದೆ ಅತಿಥಿ ಉಪನ್ಯಾಸಕ ಪ್ರತಿಭಟನೆ

ಪ್ರಸ್ತುತ ನೇಮಕಾತಿ ಅಧಿಸೂಚನೆಯನ್ನು ರದ್ದುಪಡಿಸಿ, ಸೇವೆಯಲ್ಲಿರುವ ಅತಿಥಿ ಉಪನ್ಯಾಸಕರುಗಳಿಗೆ ಉದ್ಯೋಗ ಭದ್ರತೆ ನೀಡುವ ಅಂಶಗಳನ್ನು ತಾವು ಮಾನವೀಯ ದೃಷ್ಟಿಯಿಂದ ಪರಿಗಣಿಸಬೇಕು. ಕೋವಿಡ್ ಸಂಕಷ್ಟದಿಂದ ನಲುಗಿ ಹೋಗಿರುವ ಅತಿಥಿ ಉಪನ್ಯಾಸಕರಿಗೆ ಉದ್ಯೋಗ ಭದ್ರತೆ ಘೋಷಿಸುವ ನಿಟ್ಟಿನಲ್ಲಿ ಐತಿಹಾಸಿಕ ತೀರ್ಮಾನಕ್ಕೆ ಬರಬೇಕೆಂದು ಒತ್ತಾಯಿಸಿದರು.

ಆತ್ಮಹತ್ಯೆ ಮಾಡಿಕೊಂಡ ಅತಿಥಿ ಉಪನ್ಯಾಸಕರ ನೊಂದ ಕುಟುಂಬಗಳಿಗೆ 10 ಲಕ್ಷ ರೂ. ಪರಿಹಾರ ಧನ ನೀಡಬೇಕೆಂದು ಜಿಲ್ಲಾಡಳಿತಕ್ಕೆ ಮನವಿ ಮಾಡಲಾಯಿತು.

ABOUT THE AUTHOR

...view details