ಕರ್ನಾಟಕ

karnataka

ETV Bharat / state

ಹಾಸನ: ರಾಷ್ಟ್ರೀಯ ಹೆದ್ದಾರಿಯಲ್ಲಿ ಹಾಲು-ತುಪ್ಪ ಬಿಟ್ಟು ಪ್ರತಿಭಟನೆ - protest to make road in hasan

ಹಾಸನ ಜಿಲ್ಲೆಯ ಬಾಳ್ಳುಪೇಟೆ ಗ್ರಾಮದ ರಾಷ್ಟ್ರೀಯ ಹೆದ್ದಾರಿ 75ರಲ್ಲಿ ವಿವಿಧ ಸಂಘಟನೆಗಳ ಸದಸ್ಯರು ರಸ್ತೆಯನ್ನು ಮರು ಡಾಂಬರೀಕರಣ ಮಾಡುವಂತೆ ಆಗ್ರಹಿ ಹಾಲ-ತುಪ್ಪ ಬಿಡುವ ಮೂಲಕ ಪ್ರತಿಭಟಿಸಿದರು.

ರಸ್ತೆ ಸೆಇಪಡಿಸುವಂತೆ ಆಗ್ರಹಿಸಿ ಪ್ರತಿಭಟನೆ

By

Published : Oct 26, 2019, 11:29 AM IST

ಹಾಸನ:ರಾಷ್ಟ್ರೀಯ ಹೆದ್ದಾರಿ 75 ಮರು ಡಾಂಬರೀಕರಣಕ್ಕೆ ಆಗ್ರಹಿಸಿ ವಿವಿಧ ಸಂಘಟನೆಗಳ ವತಿಯಿಂದ ತಾಲೂಕಿನ ಬಾಳ್ಳುಪೇಟೆ ಗ್ರಾಮದಲ್ಲಿ ನಡೆಯುತ್ತಿರುವ ಪ್ರತಿಭಟನೆ 3ನೇ ದಿನಕ್ಕೆ ಕಾಲಿಟ್ಟಿದ್ದು, ಪ್ರತಿಭಟನೆ ಅಂಗವಾಗಿ ರಾಷ್ಟ್ರೀಯ ಹೆದ್ದಾರಿ 75ರಲ್ಲಿ ನಡೆದಿರುವ ವಿವಿಧ ಅಪಘಾತಗಳಲ್ಲಿ ಮೃತಪಟ್ಟವರ ಸ್ಮರಣಾರ್ಥ ಹಾಲು-ತುಪ್ಪ ಬಿಡುವ ಮುಖಾಂತರ ವಿನೂತನವಾಗಿ ಪ್ರತಿಭಟನೆ ನಡೆಸಲಾಯಿತು.

ಪ್ರತಿಭಟನೆಯ ನೇತೃತ್ವವನ್ನು ವಹಿಸಿಕೊಂಡಿದ್ದ ತಾಪಂ ಸದಸ್ಯ ಯಡೆಹಳ್ಳಿ ಮಂಜುನಾಥ್ ಮಾತನಾಡಿ, ರಾಷ್ಟ್ರೀಯ ಹೆದ್ದಾರಿ 75 ದುರಸ್ತಿಗೆ ಆಗ್ರಹಿಸಿ 3 ದಿನಗಳಿಂದ ಪ್ರತಿಭಟನೆ ಮಾಡಲಾಗುತ್ತಿದ್ದರೂ ಸ್ಥಳಕ್ಕೆ ಭೇಟಿ ನೀಡಿ ಸಮಸ್ಯೆ ಆಲಿಸಬೇಕಾಗಿದ್ದ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಉನ್ನತ ಅಧಿಕಾರಿಗಳು ಬಂದಿಲ್ಲ. ಇದೇ ರೀತಿ ಜಿಲ್ಲಾ ಉಸ್ತುವಾರಿ ಸಚಿವರಾದ ಜೆ.ಸಿ.ಮಾಧುಸ್ವಾಮಿ ಸಹ ಸ್ಥಳಕ್ಕೆ ಬಂದಿಲ್ಲ. ಇವರು ಸ್ಥಳಕ್ಕೆ ಬಂದು ರಸ್ತೆ ದುರಸ್ತಿ ಮಾಡುವ ಸೃಷ್ಟ ಭರವಸೆ ನೀಡುವವರೆಗೂ ನಾವು ಪ್ರತಿಭಟನೆ ಕೈ ಬಿಡುವುದಿಲ್ಲ ಎಂದರು.

ರಸ್ತೆ ಸರಿಪಡಿಸುವಂತೆ ಆಗ್ರಹಿಸಿ ಪ್ರತಿಭಟನೆ

ಈ ವೇಳೆ ಬಾಳ್ಳುಪೇಟೆ ವೃತ್ತದ ಬಳಿ ಕೆಲಕಾಲ ರಸ್ತೆ ತಡೆ ಮಾಡಿದ್ದರಿಂದ ಹೆದ್ದಾರಿಯ ಎರಡೂ ಬದಿಯಲ್ಲಿ 3 ಕಿ.ಮೀ.ಗೂ ಅಧಿಕ ದೂರ ಟ್ರಾಫಿಕ್ ಜಾಂ ಉಂಟಾಗಿತ್ತು. ಈ ಸಂದರ್ಭದಲ್ಲಿ ರಸ್ತೆಯಲ್ಲಿ ಪ್ರತಿಭಟನೆ ಮಾಡದಂತೆ ಪೊಲೀಸರು ಮನವಿ ಮಾಡಿದಾಗ ಪ್ರತಿಭಟನಕಾರರು ಒಪ್ಪಿರಲಿಲ್ಲ. ನಂತರ ಗ್ರಾಮಾಂತರ ಠಾಣೆಯ ಪಿಎಸ್‌ಐ ಬ್ಯಾಟರಾಯನಗೌಡ ಹಾಗೂ ಪ್ರತಿಭಟನಾಕಾರರ ನಡುವೆ ಕೆಲಕಾಲ ಮಾತಿನ ಚಕಮಕಿ ನಡೆಯಿತು. ಅಂತಿಮವಾಗಿ ಸಂಜೆ ವೇಳೆಗೆ ಜಿಲ್ಲಾ ಉಸ್ತುವಾರಿ ಸಚಿವರು ಸ್ಥಳಕ್ಕೆ ಆಗಮಿಸುತ್ತಾರೆ ಎಂದು ಪೊಲೀಸರು ತಿಳಿಸಿದ್ದರಿಂದ ರಸ್ತೆ ತಡೆ ಹಿಂಪಡೆಯಲಾಯಿತು.

ABOUT THE AUTHOR

...view details