ಹಾಸನ:ಡಾ. ಬಿ.ಆರ್.ಅಂಬೇಡ್ಕರ್ ಮನೆ ಮೇಲೆ ದುಷ್ಕರ್ಮಿಗಳು ದಾಳಿ ನಡೆಸಿರುವುದನ್ನು ಖಂಡಿಸಿ ಕರ್ನಾಟಕ ಪ್ರಜಾ ಶಕ್ತಿ ಸಮಿತಿಯಿಂದ ಜಿಲ್ಲಾಧಿಕಾರಿ ಕಚೇರಿ ಮುಂದೆ ಪ್ರತಿಭಟಿಸಲಾಯಿತು.
ಅಂಬೇಡ್ಕರ್ ನಿವಾಸ ಹಾನಿ ಖಂಡಿಸಿ ಪ್ರತಿಭಟನೆ
ಮುಂಬೈನ ಅಂಬೇಡ್ಕರ್ ನಿವಾಸದ ಮೇಲೆ ಕೆಲ ಕಿಡಿಗೇಡಿಗಳು ದಾಳಿ ನಡೆಸಿ ಹಾನಿ ಮಾಡಿದ್ದರು. ಈ ಹಿನ್ನೆಲೆ ಕೃತ್ಯ ಎಸಗಿದವರನ್ನು ಕೂಡಲೇ ಬಂಧಿಸಿ ಕಾನೂನು ಕ್ರಮ ಕೈಗೊಳ್ಳಬೇಕೆಂದು ಕರ್ನಾಟಕ ಪ್ರಜಾ ಶಕ್ತಿ ಸಮಿತಿ ವತಿಯಿಂದ ಪ್ರತಿಭಟನೆ ನಡೆಸಿ ಮನವಿ ನೀಡಲಾಗಿದೆ.
ಅಂಬೇಡ್ಕರ್ ನಿವಾಸದ ಮೇಲಿನ ಕಿಡಿಗೇಡಿಗಳ ಕೃತ್ಯ ಖಂಡಿಸಿ ಹಾಸನದಲ್ಲಿ ಪ್ರತಿಭಟನೆ
ನಗರದ ಹೇಮಾವತಿ ಪ್ರತಿಮೆಯಿಂದ ಹೊರಟ ಪ್ರತಿಭಟನಾ ಮೆರವಣಿಗೆಯು ಎನ್.ಆರ್. ವೃತ್ತದ ಮೂಲಕ ಜಿಲ್ಲಾಧಿಕಾರಿ ಕಚೇರಿ ಆವರಣಕ್ಕೆ ತಲುಪಿ ಮನವಿ ಸಲ್ಲಿಸಲಾಯಿತು.
ಬಿಳಿಕ ಕರ್ನಾಟಕ ಪ್ರಜಾ ಶಕ್ತಿ ಸಮಿತಿ ಜಿಲ್ಲಾಧ್ಯಕ್ಷ ಪ್ರವೀಣ್ ಗೌಡ ಮಾತನಾಡಿ, ಯಾರೋ ಉದ್ದೇಶಪೂರ್ವಕವಾಗಿಯೇ ಮನೆ ಮೇಲೆ ದಾಳಿ ಮಾಡಿರುವುದನ್ನು ಖಂಡಿಸುವುದಾಗಿ ಹೇಳಿದರು. ಸಂವಿಧಾನ ಶಿಲ್ಪಿಯ ಮನೆಯ ಮೇಲೆ ಇಂತಹ ದೌರ್ಜನ್ಯ ನಡೆಯುತ್ತಿರುವುದು ಇಂದಿನ ಸಮಾಜದ ದುರ್ದೈವ ಎಂದರು.