ಹಾಸನ: ಕಟ್ಟಡ ಕಾರ್ಮಿಕ ಕಲ್ಯಾಣ ಅಭಿವೃದ್ಧಿ ಇಲಾಖೆಯ ಆಯುಕ್ತರಾಗಿ ಕೆಲಸ ನಿರ್ವಹಿಸಿರುವ ರೋಹಿಣಿ ಸಿಂಧೂರಿಯವರನ್ನೇ ಮತ್ತೆ ಅದೇ ಇಲಾಖೆಗೆ ಆಯುಕ್ತರನ್ನಾಗಿ ನೇಮಕ ಮಾಡುವಂತೆ ಒತ್ತಾಯಿಸಿ ಜಿಲ್ಲಾಧಿಕಾರಿ ಆರ್.ಗಿರೀಶ್ ಅವರಿಗೆ ಮನವಿ ಸಲ್ಲಿಸಲಾಯಿತು.
ರೋಹಿಣಿ ಸಿಂಧೂರಿಯವರನ್ನೇ ಕಟ್ಟಡ ಕಾರ್ಮಿಕ ಕಲ್ಯಾಣ ಅಭಿವೃದ್ಧಿ ಇಲಾಖೆ ಆಯುಕ್ತರನ್ನಾಗಿ ನೇಮಿಸಲು ಆಗ್ರಹ - ರೋಹಿಣಿ ಸಿಂಧೂರಿ
ಕಟ್ಟಡ ಕಾರ್ಮಿಕ ಕಲ್ಯಾಣ ಅಭಿವೃದ್ಧಿ ಇಲಾಖೆಯ ಆಯುಕ್ತರಾಗಿ ಕೆಲಸ ನಿರ್ವಹಿಸಿರುವ ರೋಹಿಣಿ ಸಿಂಧೂರಿಯವರನ್ನೇ ಮತ್ತೆ ಅದೇ ಇಲಾಖೆಗೆ ಆಯುಕ್ತರನ್ನಾಗಿ ನೇಮಕ ಮಾಡುವಂತೆ ಒತ್ತಾಯಿಸಿ ಜಿಲ್ಲಾಧಿಕಾರಿ ಆರ್.ಗಿರೀಶ್ ಅವರಿಗೆ ಮನವಿ ಸಲ್ಲಿಸಲಾಯಿತು.
ಕರ್ನಾಟಕ ಪ್ರಜಾಶಕ್ತಿ ಜಿಲ್ಲಾಧ್ಯಕ್ಷ ಪ್ರವೀಣ್ ಗೌಡ ಮಾತನಾಡಿ, ದಕ್ಷ ಅಧಿಕಾರಿ ರೋಹಿಣಿ ಸಿಂಧೂರಿ ಈ ಹಿಂದೆ ಹಾಸನ ಜಿಲ್ಲಾಧಿಕಾರಿಯಾಗಿ ಉತ್ತಮ ಕರ್ತವ್ಯ ನಿರ್ವಹಿಸಿದ್ದರು. ಅವರು ಹಾಸನ ಜಿಲ್ಲೆಯಲ್ಲಿ ನಡೆಯುತ್ತಿದ್ದಂತಹ ಭ್ರಷ್ಟಾಚಾರಗಳನ್ನು ತಡೆಗಟ್ಟಿ, ಯಾವುದೇ ಉನ್ನತ ಅಧಿಕಾರಿಗಳಿಗಾಗಲಿ ಅಥವಾ ಯಾವುದೇ ರಾಜಕೀಯ ಪಕ್ಷದ ಒತ್ತಡಕ್ಕಾಗಲಿ ಮಣಿಯದೆ ಕೆಲಸ ಮಾಡುತ್ತಿದ್ದರು. ಕೆಲವು ರಾಜಕೀಯ ವ್ಯಕ್ತಿಗಳು ಅವರ ಖಡಕ್ ಕಾರ್ಯದಿಂದ ರೋಸಿ ಹೋಗಿ, ಅವರ ಮೇಲೆ ರಾಜಕೀಯ ಒತ್ತಡ ತಂದು ಬೆಂಗಳೂರಿನ ಕಟ್ಟಡ ಕಾರ್ಮಿಕ ಕಲ್ಯಾಣ ಅಭಿವೃದ್ಧಿ ಇಲಾಖೆ ಆಯುಕ್ತರನ್ನಾಗಿ ವರ್ಗಾವಣೆ ಮಾಡಿದ್ದರು ಎಂದರು.