ಸಕಲೇಶಪುರ:ಕಾಡಾನೆ ಸಮಸ್ಯೆಗೆ ಶಾಶ್ವತ ಪರಿಹಾರ ಹುಡುಕುವಂತೆ ಆಗ್ರಹಿಸಿ ಶಾಸಕ ಎಚ್.ಕೆ ಕುಮಾರಸ್ವಾಮಿ ನೇತೃತ್ವದಲ್ಲಿ ವಿವಿಧ ಸಂಘಟನೆಗಳ ವತಿಯಿಂದ ಪಟ್ಟಣದಲ್ಲಿ ಬೃಹತ್ ಪ್ರತಿಭಟನೆ ಮಾಡಲಾಯಿತು.
ಕಾಡಾನೆಗಳ ದಾಳಿಯಿಂದ ತಾಲೂಕಿನ ಕೊಲ್ಲಹಳ್ಳಿ ಗ್ರಾಮದಲ್ಲಿ ಮಂಗಳವಾರ ಮುಂಜಾನೆ ಅಸ್ತಿಕ ಭಟ್ ಎಂಬುವರು ಮೃತಪಟ್ಟ ಹಿನ್ನೆಲೆ ಆಕ್ರೋಶಗೊಂಡ ಬೆಳೆಗಾರರು ಕರ್ನಾಟಕ ಬೆಳೆಗಾರರ ಒಕ್ಕೂಟ, ಹಾಸನ ಜಿಲ್ಲಾ ಬೆಳೆಗಾರರ ಸಂಘ, ಕರ್ನಾಟಕ ರಕ್ಷಣಾ ವೇದಿಕೆ ನಾರಾಯಣ ಗೌಡರ ಬಣ, ಕರವೇ ಸ್ವಾಭಿಮಾನಿ ಸೇವೆ, ನಮ್ಮ ಕರವೇ ಸಂಘಟನೆಗಳ ನೇತೃತ್ವದಲ್ಲಿ ಕಾಡಾನೆ ಸಮಸ್ಯೆ ಬಗೆಹರಿಸುವಂತೆ ಆಗ್ರಹಿಸಿ ಬೃಹತ್ ಪ್ರತಿಭಟನೆ ನಡೆಸಲಾಯಿತು.
ಈ ಸಂದರ್ಭದಲ್ಲಿ ಶಾಸಕ ಎಚ್.ಕೆ ಕುಮಾರಸ್ವಾಮಿ ಸೇರಿದಂತೆ ವಿವಿಧ ಸಂಘಟನೆಗಳ ಮುಖಂಡರು ಮಾತನಾಡಿ, ಜಿಲ್ಲೆಯಲ್ಲಿ ಸುಮಾರು 25 ಸಾವಿರಕ್ಕೂ ಹೆಚ್ಚು ಎಕರೆ ಪ್ರದೇಶದಲ್ಲಿ 70ಕ್ಕೂ ಹೆಚ್ಚು ಕಾಡಾನೆಗಳ ಸಂಚಾರವಿದೆ. ಈ ಕುರಿತು ವರದಿಯನ್ನು ಉಪ ಅರಣ್ಯ ಸಂರಕ್ಷಣಾಧಿಕಾರಿಗಳ ಮೂಲಕ ಜಿಲ್ಲಾಧಿಕಾರಿಗಳಿಗೆ ಸಲ್ಲಿಸಿ ಅಲ್ಲಿಂದ ಸರ್ಕಾರ ಹಾಗೂ ಪರಿಸರ ಇಲಾಖೆಗೂ ಕೂಡ ವರದಿ ಸಲ್ಲಿಸಿದ್ದರೂ ಸಹ ಯಾವುದೇ ಪ್ರಯೋಜನವಾಗಿಲ್ಲ ಎಂದ್ರು.