ಕರ್ನಾಟಕ

karnataka

ETV Bharat / state

ಹೇಮಾವತಿ ಸಕ್ಕರೆ ಕಾರ್ಖಾನೆ ಕಾರ್ಯಾರಂಭಗೊಳ್ಳದ್ದನ್ನ ಖಂಡಿಸಿ ಪ್ರತಿಭಟನೆ... - Channarayapatnam

ಕಾರ್ಖಾನೆಯನ್ನು ಐದು ವರ್ಷದಿಂದ ಆರಂಭ ಮಾಡದ ಪರಿಣಾಮ ಎರಡು ಲಕ್ಷ ಟನ್‌ಗೂ ಹೆಚ್ಚು ಕಬ್ಬು ಗದ್ದೆಯಲ್ಲೇ ಒಣಗುತ್ತಿದೆ. ಅಷ್ಟೇ ಅಲ್ಲ, ಕಾರ್ಖಾನೆ ವಹಿಸಿಕೊಂಡವರು ಸರ್ಕಾರಕ್ಕೆ ಕೋಟ್ಯಂತರ ರೂಪಾಯಿ ಹಣ ಪಾವತಿಸಬೇಕಿದ್ದು, ಅದನ್ನೂ ಕೂಡ ನೀಡಿಲ್ಲ..

By

Published : Sep 7, 2020, 9:38 PM IST

ಚನ್ನರಾಯಪಟ್ಟಣ: ಕಳೆದ ಐದು ವರ್ಷಗಳಿಂದ ಹಾಸನ ಜಿಲ್ಲೆ, ಚನ್ನರಾಯಪಟ್ಟಣ ತಾಲೂಕಿನ ಶ್ರೀನಿವಾಸಪುರದಲ್ಲಿರುವ ಹೇಮಾವತಿ ಸಕ್ಕರೆ ಕಾರ್ಖಾನೆ ಕಾರ್ಯಾರಂಭ ಮಾಡದಿರುವುದನ್ನು ವಿರೋಧಿಸಿ ಎಂಎಲ್‌ಸಿ ಗೋಪಾಲಸ್ವಾಮಿ ನೇತೃತ್ವದಲ್ಲಿ ಬೃಹತ್ ಪ್ರತಿಭಟನೆ ನಡೆಸಲಾಯಿತು‌.

ಎಂಎಲ್‌ಸಿ ಗೋಪಾಲಸ್ವಾಮಿ ನೇತೃತ್ವದಲ್ಲಿ ಬೃಹತ್ ಪ್ರತಿಭಟನೆ.‌.

ಇಂದು ಹೇಮಾವತಿ ಸಕ್ಕರೆ ಕಾರ್ಖಾನೆ ಬಳಿ ಎಂಎಲ್​ಸಿ ಗೋಪಾಲಸ್ವಾಮಿ ನೇತೃತ್ವದಲ್ಲಿ ಎತ್ತಿನಗಾಡಿ, ಟ್ರ್ಯಾಕ್ಟರ್‌ನಲ್ಲಿ ಜಮಾಯಿಸಿದ ಸಾವಿರಾರು ಜನ ಸರ್ಕಾರ ಮತ್ತು ಸ್ಥಳೀಯ ಶಾಸಕ ಬಾಲಕೃಷ್ಣ ವಿರುದ್ಧ ಆಕ್ರೋಶ ಹೊರ ಹಾಕಿದರು.

ಹೇಮಾವತಿ ಸಹಕಾರಿ ಸಕ್ಕರೆ ಕಾರ್ಖಾನೆಯನ್ನು ಚಾಮುಂಡೇಶ್ವರಿ ಸಕ್ಕರೆ ಕಾರ್ಖಾನೆಯವರೆಗೆ ಗುತ್ತಿಗೆ ನೀಡಲಾಗಿದೆ. ಅವರು ಕಾರ್ಖಾನೆಯನ್ನು ಐದು ವರ್ಷದಿಂದ ಆರಂಭ ಮಾಡದ ಪರಿಣಾಮ ಎರಡು ಲಕ್ಷ ಟನ್‌ಗೂ ಹೆಚ್ಚು ಕಬ್ಬು ಗದ್ದೆಯಲ್ಲೇ ಒಣಗುತ್ತಿದೆ. ಅಷ್ಟೇ ಅಲ್ಲ, ಕಾರ್ಖಾನೆ ವಹಿಸಿಕೊಂಡವರು ಸರ್ಕಾರಕ್ಕೆ ಕೋಟ್ಯಂತರ ರೂಪಾಯಿ ಹಣ ಪಾವತಿಸಬೇಕಿದ್ದು, ಅದನ್ನೂ ಕೂಡ ನೀಡಿಲ್ಲ.

ಈ ಅವ್ಯವಸ್ಥೆಗೆ ಸ್ಥಳೀಯ ಶಾಸಕ ಬಾಲಕೃಷ್ಣ ಅವರೂ ಕೂಡ ಕಾರಣರಾಗಿದ್ದಾರೆ ಎಂದು ಎಂಎಲ್‌ಸಿ ಗೋಪಾಲಸ್ವಾಮಿ ವಾಗ್ದಾಳಿ ನಡೆಸಿದ್ದಾರೆ. ಚನ್ನರಾಯಪಟ್ಟಣದಲ್ಲಿ ಪಾದಯಾತ್ರೆ ಮಾಡುತ್ತ ತಹಶೀಲ್ದಾರ್ ಕಚೇರಿಗೆ ಆಗಮಿಸಿದ ಎಂಎಲ್‌ಸಿ ಗೋಪಾಲಸ್ವಾಮಿ, ತಹಶೀಲ್ದಾರ್ ಮಾರುತಿ ಪ್ರಸನ್ನ ಅವರಿಗೆ ಮನವಿ ಪತ್ರ ಸಲ್ಲಿಸಿ ತಕ್ಷಣ ಕಾರ್ಖಾನೆ ಆರಂಭಿಸಲು ಕ್ರಮ ಕೈಗೊಳ್ಳದಿದ್ದರೆ ಉಗ್ರ ಹೋರಾಟ ನಡೆಸೋದಾಗಿ ಎಚ್ಚರಿಸಿದರು.

ABOUT THE AUTHOR

...view details