ಕರ್ನಾಟಕ

karnataka

By

Published : Jul 28, 2020, 7:08 PM IST

ETV Bharat / state

ಅತಿಥಿ ಉಪನ್ಯಾಸಕರ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಪ್ರತಿಭಟನೆ

ಈಗಾಗಲೇ ದೆಹಲಿ, ಹರಿಯಾಣ, ಪಶ್ಚಿಮ ಬಂಗಾಳ ಇತರೆ ರಾಜ್ಯಗಳಲ್ಲಿ ಅತಿಥಿ ಉಪನ್ಯಾಸಕರಿಗೆ ಉದ್ಯೊಗ ಭದ್ರತೆ, ವೇತನ ಹೆಚ್ಚಳ ಮತ್ತು ಖಾಯಂ ಮಾಡುವ ನಿರ್ಧಾರ ಮಾಡಲಾಗಿದೆ..

Protests by guest lecturers in hassan
ಪ್ರತಿಭಟನೆ

ಹಾಸನ :ಸಹಾಯಕ ಪ್ರಾಧ್ಯಾಪಕರ ನೇಮಕಾತಿ ಅಧಿಸೂಚನೆ ರದ್ದುಪಡಿಸಿ ಅತಿಥಿ ಉಪನ್ಯಾಸಕರಿಗೆ ಉದ್ಯೋಗ ಭದ್ರತೆ ಹಾಗೂ ಖಾಯಂಗೊಳಿಸುವಂತೆ ಆಗ್ರಹಿಸಿ ಜಯಕರ್ನಾಟಕ ಸಂಘಟನೆ ಬೆಂಬಲದೊಂದಿಗೆ ಸರ್ಕಾರಿ ಪದವಿ ಕಾಲೇಜುಗಳ ಅತಿಥಿ ಉಪನ್ಯಾಸಕರ ರಾಜ್ಯ ಸಮನ್ವಯ ಸಮಿತಿ ಸದಸ್ಯರು ಜಿಲ್ಲಾಧಿಕಾರಿ ಕಚೇರಿ ಮುಂದೆ ಪ್ರತಿಭಟಿಸಿದರು.

ರಾಜ್ಯದ 412 ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿ 14,564 ಅತಿಥಿ ಉಪನ್ಯಾಸಕರು ಕನಿಷ್ಠ ವೇತನ ಪಡೆದು ಸೇವೆ ಸಲ್ಲಿಸುತ್ತಿದ್ದಾರೆ. ಕೋವಿಡ್​​-19 ಲಾಕ್​​ಡೌನ್​​ನಿಂದಾಗಿ ವೇತನವಿಲ್ಲದೆ ತೀವ್ರ ಸಂಕಷ್ಟ ಎದುರಿಸುತ್ತಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಇದೀಗ ಶಿಕ್ಷಣ ಇಲಾಖೆ ಹೊಸದಾಗಿ ಸಹಾಯಕ ಪ್ರಾಧ್ಯಾಪಕರ ನೇಮಕಾತಿಗೆ ಜುಲೈ7ರಂದು ಅಧಿಕೃತ ಗೆಜೆಟ್ ನೋಟಿಫಿಕೇಷನ್ ಹೊರಡಿಸಿದೆ. ಇದರಿಂದ 2,400ಕ್ಕೂ ಹೆಚ್ಚು ಅತಿಥಿ ಉಪನ್ಯಾಸಕರು ಕೆಲಸ ಕಳೆದುಕೊಳ್ಳುವ ಆತಂಕದಲ್ಲಿದ್ದಾರೆ. ಪ್ರಸ್ತುತ ನೇಮಕಾತಿಯ ಅಧಿಸೂಚನೆಗೆ ಸಂಬಂಧಪಟ್ಟಂತೆ ಸಲಹೆ, ಆಕ್ಷೇಪಣೆ ಸಲ್ಲಿಸಿದ್ದರೂ ಸಹ ಯಾವುದನ್ನೂ ಇಲಾಖೆ ಪರಿಗಣಿಸಿಲ್ಲ. ಇದು ಅತಿಥಿ ಉಪನ್ಯಾಸಕರ ಆತಂಕಕ್ಕೀಡು ಮಾಡಿದೆ ಎಂದರು.

ಅತಿಥಿ ಉಪನ್ಯಾಸಕರ ಪ್ರತಿಭಟನೆ

ಈಗಾಗಲೇ ದೆಹಲಿ, ಹರಿಯಾಣ, ಪಶ್ಚಿಮ ಬಂಗಾಳ ಇತರೆ ರಾಜ್ಯಗಳಲ್ಲಿ ಅತಿಥಿ ಉಪನ್ಯಾಸಕರಿಗೆ ಉದ್ಯೊಗ ಭದ್ರತೆ, ವೇತನ ಹೆಚ್ಚಳ ಮತ್ತು ಖಾಯಂ ಮಾಡುವ ನಿರ್ಧಾರ ಮಾಡಲಾಗಿದೆ. ಆದ್ದರಿಂದ ಪ್ರಸ್ತುತ ನೇಮಕಾತಿ ಅಧಿಸೂಚನೆ ರದ್ದುಪಡಿಸಿ, ಅತಿಥಿ ಉಪನ್ಯಾಸಕಕರಿಗೆ ಉದ್ಯೋಗ ಭದ್ರತೆ ನೀಡುವ ಅಂಶಗಳನ್ನು ಪರಿಗಣಿಸಬೇಕು. ಆತ್ಮಹತ್ಯೆ ಮಾಡಿಕೊಂಡ ಅತಿಥಿ ಉಪನ್ಯಾಸಕರ ಕುಟುಂಬಗಳಿಗೆ ತಲಾ ₹10 ಲಕ್ಷ ಪರಿಹಾರ ನೀಡಬೇಕು ಎಂದು ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಿದರು.

ABOUT THE AUTHOR

...view details