ಹಾಸನ: ಸಾರ್ವಜನಿಕರ ಅನುಕೂಲಕ್ಕಾಗಿ ಹಾಕಿದ್ದ ರಸ್ತೆ ಉಬ್ಬನ್ನು ಜೆಸಿಬಿ ಯಂತ್ರದಿಂದ ತೆರವುಗೊಳಿಸರುವ ಕಿಡಿಗೇಡಿಗಳ ವಿರುದ್ದ ಕ್ರಮ ಕೈಗೊಂಡು, ತಕ್ಷಣ ರಸ್ತೆ ಉಬ್ಬು ನಿರ್ಮಿಸಬೇಕೆಂದು ಒತ್ತಾಯಿಸಿ ತಾಲೂಕು ಜಯ ಕರ್ನಾಟಕ ಸಂಘಟನೆ ಕಾರ್ಯಕರ್ತರು ಪ್ರತಿಭಟಿಸಿದರು.
ರೋಡ್ ಹಂಪ್ಸ್ ಧ್ವಂಸಗೊಳಿಸಿದವರ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಹಾಸನದಲ್ಲಿ ಪ್ರತಿಭಟನೆ - ಹಾಸನ ಜಿಲ್ಲೆ
ಹಾಸನದಲ್ಲಿ ಸಾರ್ವಜನಿಕರ ಅನುಕೂಲಕ್ಕಾಗಿ ಹಾಕಿದ್ದ ರಸ್ತೆ ಉಬ್ಬನ್ನು ಜೆಸಿಬಿ ಯಂತ್ರದಿಂದ ತೆರವುಗೊಳಿಸುವ ಕಿಡಿಗೇಡಿಗಳ ವಿರುದ್ದ ಕ್ರಮ ಕೈಗೊಂಡು, ತಕ್ಷಣ ರಸ್ತೆ ಉಬ್ಬು ನಿರ್ಮಿಸಬೇಕೆಂದು ಒತ್ತಾಯಿಸಿ ತಾಲೂಕು ಜಯ ಕರ್ನಾಟಕ ಸಂಘಟನೆ ಕಾರ್ಯಕರ್ತರು ಪ್ರತಿಭಟಿಸಿದರು.
ಈ ವೇಳೆ ಮಾತನಾಡಿದ ಜಯ ಕರ್ನಾಟಕ ಸಂಘದ ತಾಲೂಕು ಅಧ್ಯಕ್ಷ ಮಾತನಾಡಿ, ಅಂಬೇಡ್ಕರ್ ವೃತ್ತದಲ್ಲಿ ದಿನನಿತ್ಯ ಸಾವಿರಾರು ವಾಹನಗಳು ಹಾಗೂ ಸಾರ್ವಜನಿಕರು ಮತ್ತು ಶಾಲಾ-ಕಾಲೇಜುಗಳ ವಿದ್ಯಾರ್ಥಿಗಳು ಓಡಾಡುತ್ತಾರೆ. ಆದರೆ ಈ ರಸ್ತೆಯಲ್ಲಿ ಹಂಪ್ಸ್ ಇಲ್ಲದ ಕಾರಣ ಅತಿ ವೇಗವಾಗಿ ವಾಹನಗಳು ಸಂಚರಿಸಿ ಸಾಕಷ್ಟು ಅಪಘಾತಗಳು ಸಂಭವಿಸುತ್ತಲೇ ಇರುತ್ತವೆ. ಅಲ್ಲದೆ ಈ ಹಿಂದೆ ಸಾಕಷ್ಟು ಅಪಘಾತಗಳು ಸಂಭವಿಸಿದ ಹಿನ್ನಲೆ ಈ ಸ್ಥಳದಲ್ಲಿ ಹಂಪ್ಸ್ ನಿರ್ಮಿಸಿದ್ರು. ಆದರೆ ಕೆಲ ಕಿಡಿಗೇಡಿಗಳು ರಾತ್ರಿ ಸಮಯದಲ್ಲಿ ಜೆಸಿಬಿ ಮೂಲಕ ತೆರವುಗೊಳಿಸಿದ್ದು ಖಂಡನೀಯ ಎಂದರು.
ಇನ್ನು ಈ ಕೃತ್ಯವೆಸಗಿದವರ ಪತ್ತೆ ಹಚ್ಚಿ ಅವರ ವಿರುದ್ಧ ಸಂಬಂಧಪಟ್ಟ ಅಧಿಕಾರಿಗಳು ಸೂಕ್ತ ಕ್ರಮ ಕೈಗೊಂಡು, ತಕ್ಷಣವೇ ಅಂಬೇಡ್ಕರ್ ವೃತ್ತದ ಗೆಂಡೇಹಳ್ಳಿ ರಸ್ತೆಗೆ ರಸ್ತೆ ಉಬ್ಬು ನಿರ್ಮಿಸಿ ಸಾರ್ವಜನಿಕರ ಓಡಾಟಕ್ಕೆ ಅನುಕೂಲ ಕಲ್ಪಿಸಿಕೊಡಬೇಕೆಂದು ಎಂದು ಪ್ರತಿಭಟನಕಾರರು ಆಗ್ರಹಿಸಿದ್ದಾರೆ.