ಹಾಸನ: ಉತ್ತರ ಪ್ರದೇಶದಲ್ಲಿ ದಲಿತ ಯುವತಿ ಮೇಲೆ ಸಾಮೂಹಿಕ ಅತ್ಯಾಚಾರ ಮತ್ತು ಕೊಲೆ ಖಂಡಿಸಿ ದಲಿತ ಮತ್ತು ಪ್ರಗತಿಪರ ಸಂಘಟನೆ ಮತ್ತು ವಿವಿಧ ಸಂಟನೆಗಳಿಂದ ಜಿಲ್ಲಾಧಿಕಾರಿ ಕಚೇರಿ ಮುಂದೆ ಪ್ರತಿಭಟನೆ ನಡೆಸಿ ಆಕ್ರೋಶ ವ್ಯಕ್ತಪಡಿಸಲಾಯಿತು.
ಹಥ್ರಾಸ್ನ ಅತ್ಯಾಚಾರ ಖಂಡಿಸಿ ಹಾಸನದಲ್ಲಿ ಪ್ರತಿಭಟನೆ - ಹಾಸನ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ
ಉತ್ತರ ಪ್ರದೇಶದಲ್ಲಿ ನಡೆದ ಅತ್ಯಾಚಾರ ಮತ್ತು ಕೊಲೆ ಪ್ರಕರಣ ಖಂಡಿಸಿ ವಿವಿಧ ಸಂಟನೆಗಳಿಂದ ಹಾಸನ ಜಿಲ್ಲಾಧಿಕಾರಿ ಕಚೇರಿ ಮುಂದೆ ಪ್ರತಿಭಟನೆ ನಡೆಸಿ ಆಕ್ರೋಶ ವ್ಯಕ್ತಪಡಿಸಲಾಯಿತು.

ಹಥ್ರಾಸ್ನ ಅತ್ಯಾಚಾರ ಪ್ರಕರಣ ಖಂಡಿಸಿ ಹಾಸನಲ್ಲಿ ಪ್ರತಿಭಟನೆ
ನಾಗರೀಕರು ತಲೆ ತಗ್ಗಿಸುವಂತಹ ಘಟನೆಯಾಗಿದ್ದು, ಯುವತಿಯ ಅತ್ಯಚಾರ ನಡೆದು ಸಾವಿಗೀಡಾದರೂ ಶವವನ್ನು ಕೊಡದೇ ಮುಖ ನೋಡಲು ಬಿಡದಂತಹ ವ್ಯವಸ್ಥೆ ಉತ್ತರ ಪ್ರದೇಶದಲ್ಲಿ ನಡೆದಿದೆ. ಇಲ್ಲಿನ ಯೋಗಿ ಆದಿತ್ಯನ ಸರಕಾರ ರಾಮರಾಜ್ಯದ ಕನಸ್ಸು ಕಂಡಿರುವುದು ಇದೇನಾ ಎಂದು ಪ್ರಶ್ನೆ ಮಾಡಿದರು.
ಹಥ್ರಾಸ್ನ ಅತ್ಯಾಚಾರ ಪ್ರಕರಣ ಖಂಡಿಸಿ ಹಾಸನಲ್ಲಿ ಪ್ರತಿಭಟನೆ
ಯಾವ ಹೆಣ್ಣು ಮಗಳು ಮಧ್ಯರಾತ್ರಿಯಲ್ಲಿ ಒಂಟಿಯಾಗಿ ನಡೆಯುತ್ತಾಳೆ ಅಂದು ದೇಶಕ್ಕೆ ಸ್ವಾತಂತ್ರ್ಯ ಸಿಕ್ಕಿದೆ ಎಂದು ಮಹಾತ್ಮ ಗಾಂಧೀಜಿ ಕನಸ್ಸು ಕಂಡಿದ್ದರು. ಆದರೇ ಇವತ್ತು ಹಗಲಿನ ವೇಳೆಯಲ್ಲಿಯೇ ದಲಿತ ಯುವತಿಯ ಮೇಲೆ ಅತ್ಯಚಾರ, ಕೊಲೆಯಂತಹ ಘಟನೆಗಳು ನಡೆಯುತ್ತಿದೆ ಎಂದು ಆತಂಕ ವ್ಯಕ್ತಪಡಿಸಿದರು.