ಹಾಸನ/ಬೇಲೂರು: ಶಾಲಾ ಆವರಣದ ಸುತ್ತಮುತ್ತ 100 ಮೀಟರ್ ಅಂತರದಲ್ಲಿ ತಂಬಾಕು ಉತ್ಪನ್ನಗಳನ್ನು ಮಾರಾಟ ಮಾಡಬಾರದು ಹಾಗೂ 18 ವರ್ಷದೊಳಗಿನ ಮಕ್ಕಳಿಗೆ ಮನೆಯಲ್ಲಿ ತಂಬಾಕು, ಬೀಡಿ, ಸಿಗರೇಟ್ನಂತಹ ಪದಾರ್ಥಗಳನ್ನು ಪೋಷಕರು ಮಕ್ಕಳಿಂದ ತರಿಸಿಕೊಳ್ಳಬಾರದು ಎಂದು ಆರೋಗ್ಯ ಇಲಾಖೆಯ ಕಾರ್ಯನಿರ್ವಹಣಾಧಿಕಾರಿ ಭಾರತಿ ಹೇಳಿದ್ರು.
ತಂಬಾಕು ತ್ಯಜಿಸುವಂತೆ ವಿದ್ಯಾರ್ಥಿಗಳಿಂದ ಗುಲಾಬಿ ಆಂದೋಲನ
ಬೇಲೂರು ಪಟ್ಟಣದಲ್ಲಿ ಬೀಡಿ, ಸಿಗರೇಟ್, ಗುಟ್ಕಾ ಸೇವಿಸುವವರಿಗೆ ಸ್ಥಳದಲ್ಲಿಯೇ ಗುಲಾಬಿ ಹೂ ನೀಡಿ ಅದರಿಂದಾಗುವ ದುಷ್ಪರಿಣಾಮಗಳ ಬಗ್ಗೆ ಆರೋಗ್ಯ ಇಲಾಖೆ ಅರಿವು ಮೂಡಿಸುವ ಕಾರ್ಯಕ್ರಮ ನಡೆಸಿತು.
ಗುಲಾಬಿ ಆಂದೋಲನ
ಕಾರ್ಯಕ್ರಮದ ಬಳಿಕ ಮಾತನಾಡಿದ ಅವರು, ಶೈಕ್ಷಣಿಕ ಸಂಸ್ಥೆಗಳ ಆವರಣದಿಂದ 100 ಮೀಟರ್ ಅಂತರದಲ್ಲಿ ತಂಬಾಕು ಸೇವನೆ ಮತ್ತು ಮಾರಟ ಮಾಡುವುದನ್ನು ನಿಷೇಧಿಸಿ ಶಾಲಾ ಮಕ್ಕಳಿಂದಲೇ ಗುಲಾಬಿ ಆಂದೋಲನ ಕಾರ್ಯಕ್ರಮವನ್ನ ಇಲಾಖೆಗಳು ಮಾಡಿದ್ದು ಶ್ಲಾಘನೀಯ ಎಂದರು.
ಶಾಲಾ ಮಕ್ಕಳು ಇದರ ಬಗ್ಗೆ ಪೋಷಕರಿಗೆ ಜಾಗೃತಿ ಮೂಡಿಸಿ ಸಮಾಜದಲ್ಲಿ ಉತ್ತಮ ವ್ಯಕ್ತಿಯಾಗಿ ಹೊರಹೊಮ್ಮುವಂತೆ ಮಾಡಬೇಕು. ಈಗಾಗಲೇ ಜಿಲ್ಲೆಯಾದ್ಯಂತ ಈ ಗುಲಾಬಿ ಆಂದೋಲನ ನಡೆಸಿ ಜನಜಾಗೃತಿ ಮಾಡಲಾಗುತ್ತಿದೆ ಎಂದರು.