ಹಾಸನ:ಜಿಲ್ಲೆಯಾದ್ಯಂತ ಮಳೆಯ ಪ್ರಮಾಣ ಕಡಿಮೆಯಾಗಿದ್ದರೂ ಕೂಡಾ ಅಲ್ಲಲ್ಲಿ ತುಂತುರು ಮಳೆಯಾಗುತ್ತಿದ್ದು, ಶುಕ್ರವಾರ ಸಂಜೆಯಿಂದಲೇ ಬಿಡದೇ ಮಳೆ ಸುರಿಯುತ್ತಿದೆ.
ಹಾಸನ ಜಿಲ್ಲೆಯಲ್ಲಿ ಮುಂದುವರೆದ ಮಳೆ: ಜಲಾಶಯಗಳ ಹೊರಹರಿವು ಹೆಚ್ಚಳ ಸಾಧ್ಯತೆ - Rain Effect in Hassan District
ಜಿಲ್ಲೆಯಲ್ಲಿ ಮುಂದುವರೆದ ಮಳೆಯಿಂದಾಗಿ ಸಕಲೇಶಪುರ, ಆಲೂರು, ಬೇಲೂರು ಭಾಗದಲ್ಲಿ ಮತ್ತೆ ಜಲಾಶಯಗಳ ಹೊರಹರಿವು ಹೆಚ್ಚಳವಾಗುವ ಸಾಧ್ಯತೆ ಇದೆ.
ಹಾಸನ ಜಿಲ್ಲೆಯಲ್ಲಿ ಮುಂದುವರೆದ ಮಳೆ: ಜನರಲ್ಲಿ ಆತಂಕ
ನಿನ್ನೆ ಸಂಜೆಯಿಂದ ಸುರಿಯುತ್ತಿರುವ ಮಳೆಗೆ ಜನಜೀವನ ಅಸ್ತವ್ಯಸ್ತಗೊಂಡಿದ್ದು, ವಾಹನ ಸವಾರರು ಪರದಾಡುವಂತಾಗಿದೆ. ಜಿಲ್ಲೆಯಲ್ಲಿ ಮಳೆರಾಯನ ಅವಕೃಪೆಯಿಂದ ಜನರಲ್ಲಿ ಆತಂಕ ಮನೆಮಾಡಿದೆ. ಸಕಲೇಶಪುರ, ಆಲೂರು, ಬೇಲೂರು ಭಾಗದಲ್ಲಿ ಹೆಚ್ಚು ಮಳೆಯಾಗುತ್ತಿದ್ದು, ಮತ್ತೆ ಜಲಾಶಯಗಳ ಹೊರಹರಿವು ಹೆಚ್ಚಳವಾಗುವ ಸಾಧ್ಯತೆ ಇದೆ.