ಹಾಸನ: ಏನ್ ಯಾವಾಗ್ಲು ಬಿಜೆಪಿ ಸರ್ಕಾರ ಇರುತ್ತೆ ಅನ್ಕಂಡಿದ್ದಾರೆ. ನಾನು ಇಪ್ಪತ್ತೈದು ವರ್ಷಗಳಿಂದ ಎಲ್ಲವನ್ನೂ ನೋಡಿದ್ದೇನೆ. ಒಬ್ಬ ಶಾಸಕ ಧರಣಿ ಕೂತಿದ್ದಾನೆ ಎಂದರೆ ಸ್ಥಳಕ್ಕೆ ಒಬ್ಬ ಜಿಲ್ಲಾಧಿಕಾರಿ ಬರುವುದಿಲ್ಲ ಎಂದರೆ ನಾನೇನು ದನಕಾಯೋನಾ? ಎಂದು ಜಿಲ್ಲಾಧಿಕಾರಿ ಆರ್. ಗಿರೀಶ್ ವಿರುದ್ಧ ಶಾಸಕ ಹೆಚ್ ಡಿ ರೇವಣ್ಣ ಆಕ್ರೋಶ ವ್ಯಕ್ತಪಡಿಸಿದರು.
ಬುಧವಾರ ಮಾಧ್ಯಮಗೋಷ್ಟಿಯಲ್ಲಿ ಮಾತನಾಡಿದ ಅವರು ಡಿಸಿ ಆಫೀಸ್ ಒಡೆದು ಹಾಕಿದ್ರೆ ಅದರ ಪರಿಣಾಮ ಬೇರೆ ಆಗುತ್ತೆ. ಡಿಸಿ ಸಭೆಗೆ ಹೋದರೆ ಬೆಲೆ ಕೊಡಲ್ಲ. ಡಿಸಿ ಎಷ್ಟು ದಿನ ಆಡ್ತಾನೆ ಆಡ್ಲಿ ಎಂದು ಬೇಸರ ಹೊರಹಾಕಿದರು. ರಾತ್ರಿ ವೇಳೆ ಹಾಸನ ತಾಲೂಕು ಕಚೇರಿ ಕಟ್ಟಡ ಒಡೆದು ಹಾಕಿದ ಬಗ್ಗೆಯೂ ಅಸಮಾಧಾನ ಹೊರಹಾಕಿದ ರೇವಣ್ಣ ಅವರು, ಡಿಸಿಯವರಿಗೆ ಪುರುಸೊತ್ತಿಲ್ಲ. ರಾತ್ರಿ ವೇಳೆ ಬಿಲ್ಡಿಂಗ್ ಹೊಡೆಯುವುದರಲ್ಲಿ ಬ್ಯುಸಿ ಇದ್ದಾರೆ. ಡಿಸಿ ಅನ್ನೋ ಪದ ತೆಗೆಯಬೇಕಾಗುತ್ತದೆ ಎಂದು ವ್ಯಂಗ್ಯವಾಡಿದರು.