ಹಾಸನ:ಜಿಲ್ಲೆಯ ಮೂರು ಜೀವನದಿಗಳಾದ ಹೇಮಾವತಿ ಯಗಚಿ ಹಾಗೂ ವಾಟೆಹೊಳೆ ಜಲಾಶಯಗಳಿಗೆ ಸಾಕಷ್ಟು ಪ್ರಮಾಣದಲ್ಲಿ ಒಳಹರಿವು ಬರುತ್ತಿರುವುದರಿಂದ ಮೂರು ಜಲಾಶಯಗಳ ಕ್ರಸ್ಟ್ ಗೇಟ್ಗಳ ಮೂಲಕ ನೀರು ಬಿಡಲಾಗುತ್ತಿದೆ.
ಹೇಮಾವತಿ ಜಲಾಶಯಕ್ಕೆ ಶುಕ್ರವಾರ ಸಂಜೆ ವೇಳೆಗೆ 1,10,000 ಕ್ಯುಸೆಕ್ಸ್ ನೀರು ಹರಿದು ಬರುತ್ತಿದ್ದು, 75 ಸಾವಿರ ಕ್ಯೂಸೆಕ್ ನೀರನ್ನು ನದಿಗೆ ಹರಿಸಲಾಗುತ್ತಿದೆ. ಇದೇ ರೀತಿ ನೀರು ಹರಿದುಬಂದಿದ್ದೇ ಆದಲ್ಲಿ ಇನ್ನೊಂದು ದಿನದಲ್ಲಿ ಜಲಾಶಯ ಭರ್ತಿ ಆಗಲಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.