ಹಾಸನ: ಖಾಸಗಿ ಶಿಕ್ಷಣ ಸಂಸ್ಥೆಗಳ ಆರ್ಟಿಇ ಹಣ ಮರುಪಾವತಿ ಮತ್ತು ಅನುದಾನ ರಹಿತ ಶಾಲೆಗಳಿಗೆ ಆರ್ಥಿಕ ನೆರವು ಹಾಗೂ 6ನೇ ವೇತನ ಆಯೋಗದ ಅನ್ವಯ ವೇತನ ಪಾವತಿ ಪುನರ್ ವಿಮರ್ಶೆಗೆ ಒತ್ತಾಯಿಸಿ ಜಿಲ್ಲಾ ಅನುದಾನ ರಹಿತ ಶಾಲೆಗಳ ಆಡಳಿತ ಮಂಡಳಿಗಳ ಒಕ್ಕೂಟವು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಎಸ್.ಸುರೇಶ್ ಕುಮಾರ್ ಅವರಿಗೆ ಮನವಿ ಸಲ್ಲಿಸಿತು.
ಸಚಿವರು ನಗರದ ಜಿಲ್ಲಾ ಪಂಚಾಯಿತಿ ಸಭಾಂಗಣಕ್ಕೆ ಆಗಮಿಸಿದಾಗ ಮನವಿ ಸಲ್ಲಿಸಿದ ಒಕ್ಕೂಟದ ಸದಸ್ಯರು, ಕೊರೊನಾದಿಂದಾಗಿ ಅನುದಾನ ರಹಿತ ಶಿಕ್ಷಣ ಸಂಸ್ಥೆಗಳ ಶಾಲಾ ಸಿಬ್ಬಂದಿ ವೇತನವಿಲ್ಲದೇ, ಆರ್ಥಿಕ ಸಂಕಷ್ಟ ಅನುಭವಿಸುತ್ತಿದ್ದೇವೆ. ಕಟ್ಟಡ ನಿರ್ವಹಣೆ, ವಿದ್ಯುತ್, ನೀರು ಬಿಲ್ ಪಾವತಿಗೂ ಕಷ್ಟವಾಗಿದೆ ಎಂದು ಅಳಲು ತೋಡಿಕೊಂಡರು.