ಹಾಸನ:ಲಾಕ್ ಡೌನ್ ಹಿನ್ನೆಲೆ ಗೋಮತಿ ಕಲ್ಯಾಣ ಮಂಟಪವನ್ನು ಉಚಿತವಾಗಿ ಉಪಯೋಗಿಸಿಕೊಳ್ಳುವಂತೆ ಮಂಟಪದ ಮಾಲೀಕ ದಿನೇಶ್ ಅವರು ಜಿಲ್ಲಾಧಿಕಾರಿ ಆರ್. ಗಿರೀಶ್ ಅವರಿಗೆ ಮನವಿ ಸಲ್ಲಿಸಿದ್ದಾರೆ.
ಈ ಬಗ್ಗೆ ಮಾತನಾಡಿದ ಅವರು, ಕೊರೊನಾ ಹರಡದಂತೆ ತಡೆಯಲು ದೇಶಾದ್ಯಂತ ಲಾಕ್ ಡೌನ್ ಘೋಷಣೆಯಾಗಿದ್ದು, ಯಾರೂ ಕೂಡ ಮನೆಯಿಂದ ಹೊರಬಾರದಂತೆ ನಿರ್ದೇಶಿಸಲಾಗಿದೆ. ನಿರಾಶ್ರಿತರು, ಕೂಲಿ ಕಾರ್ಮಿಕರು ಹಾಗೂ ವಸತಿ ರಹಿತರು ಈ ಸಮಯದಲ್ಲಿ ಜೀವನ ನಡೆಸುವುದೇ ಕಷ್ಟವಾಗಿದೆ. ಹಾಗಾಗಿ ಏ14ರ ವರೆಗೂ ನಗರದ ಚನ್ನಪಟ್ಟಣದಲ್ಲಿರುವ ಗೋಮತಿ ಕಲ್ಯಾಣ ಮಂಟಪವನ್ನು ಜಿಲ್ಲಾಧಿಕಾರಿಗಳು ಅವಶ್ಯಕತೆ ಇರುವವರಿಗೆ ಉಪಯೋಗಿಸಿಕೊಳ್ಳಬಹುದಾಗಿದೆ ಎಂದು ತಿಳಿಸಿದ್ದಾರೆ.
ನಿರಾಶ್ರಿತರು, ಕೂಲಿ ಕಾರ್ಮಿಕರಿಗಾಗಿ ಕಲ್ಯಾಣ ಮಂಟಪ ಬಿಟ್ಟುಕೊಟ್ಟ ಮಾಲೀಕ - gomathi kalyan mantap
ನಿರಾಶ್ರಿತರು, ಕೂಲಿ ಕಾರ್ಮಿಕರು ಹಾಗೂ ವಸತಿ ರಹಿತರಿಗೆ ಗೋಮತಿ ಕಲ್ಯಾಣ ಮಂಟಪವನ್ನು ಉಚಿತವಾಗಿ ಉಪಯೋಗಿಸಿ ಕೊಳ್ಳುವಂತೆ ಮಾಲೀಕ ದಿನೇಶ್ ಮನವಿ ಮಾಡಿಕೊಂಡಿದ್ದಾರೆ.
ಮಾಲೀಕ ದಿನೇಶ್
ಇಂತಹ ತುರ್ತು ಸಂದರ್ಭದಲ್ಲಿ ನಾವು ನಿಮ್ಮ ಜೊತೆ ಕೈಜೋಡಿಸುತ್ತೇವೆ ಎಂದು ತಿಳಿಸಿದರು.