ಹಾಸನ: ಮತ ಹಾಕಿದ ಬಳಿಕ ಅದರ ಫೋಟೋವನ್ನು ನನಗೆ ಕೊಡಬೇಕು ಅಂತ ರೇವಣ್ಣನವರು ಜನಪ್ರತಿನಿಧಿಗಳಿಗೆ ಒತ್ತಡ ಹೇರುತ್ತಿದ್ದಾರೆ ಎಂದು ಹಾಸನ ಜಿಲ್ಲಾ ಕಾಂಗ್ರೆಸ್ ಉಸ್ತುವಾರಿ ಡಿ.ಕೆ ಸುರೇಶ್ ಗಂಭೀರ ಆರೋಪ ಮಾಡಿದ್ದಾರೆ.
ನೀತಿ ಸಂಹಿತೆ ಉಲ್ಲಂಘನೆಯಾಗುತ್ತಿದ್ದರೂ ಜಿಲ್ಲಾಡಳಿತ ಕಣ್ಮುಚ್ಚಿ ಕುಳಿತಿದೆ. ದೇವೇಗೌಡರ ಕುಟುಂಬದ ವಿರುದ್ಧ ಯಾವುದೇ ತನಿಖೆ ನಡೆಸಲು ಮುಂದಾಗಿಲ್ಲ. ಜಿಲ್ಲಾಡಳಿತದ ಎಲ್ಲ ಬೆಳವಣಿಗೆಯನ್ನು ಗಮನಿಸಿದರೆ ಜೆಡಿಎಸ್ನೊಂದಿಗೆ ಶಾಮೀಲಾಗಿದ್ದಾರೆ ಎಂಬ ಆರೋಪದೊಂದಿಗೆ ನಗರದ ಜಿಲ್ಲಾ ಕಾಂಗ್ರೆಸ್ ಕಚೇರಿಯಿಂದ ಕಾಲ್ನಡಿಗೆಯ ಮೂಲಕ ಜಿಲ್ಲಾಧಿಕಾರಿ ಕಚೇರಿ ಆವರಣಕ್ಕೆ ಮೌನ ಪ್ರತಿಭಟನೆಯ ಮೂಲಕ ಆಗಮಿಸಿ ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಿದರು.
ಜೆಡಿಎಸ್ ವಿರುದ್ಧ ವಾಗ್ದಾಳಿ ನಡೆಸಿದ ಸುರೇಶ್ ಕುಮಾರ್ ಹಾಸನ ಜಿಲ್ಲೆಯಲ್ಲಿ ಭಯದ ವಾತಾವರಣ ನಿರ್ಮಾಣವಾಗಿದೆ. ಗ್ರಾಮ ಪಂಚಾಯಿತಿ ಸದಸ್ಯರಿಗೆ ಮತ್ತು ಪುರಸಭೆ ಹಾಗೂ ನಗರಸಭೆ ಸದಸ್ಯರುಗಳಿಗೆ ಚುನಾವಣೆ ಸಂದರ್ಭದಲ್ಲಿ ಮತ ಹಾಕುವ ವೇಳೆ ಏಜೆಂಟ್ ಅವರಿಗೆ ಮತ ಚಲಾಯಿಸಿದ ಫೋಟೋವನ್ನು ತೋರಿಸಬೇಕು ಎಂದು ರೇವಣ್ಣ ಅವರು ತಾಕೀತು ಮಾಡುತ್ತಿರುವುದು ಪ್ರಜಾಪ್ರಭುತ್ವ ಮಾಡಿದಂತೆ. ಹಾಗಾಗಿ ಇದರ ವಿರುದ್ಧ ಕಾನೂನು ಕ್ರಮ ಜರುಗಿಸಬೇಕು ಎಂದು ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಿದರು.
ಮಾಜಿ ಸಚಿವ ಎ.ಮಂಜು ಕಾಂಗ್ರೆಸ್ ಸೇರುವ ಕುರಿತು ಪ್ರತಿಕ್ರಿಯಿಸಿರುವ ಅವರು, ಎ. ಮಂಜು ಸದ್ಯ ಬಿಜೆಪಿ ಪಕ್ಷದಲ್ಲಿದ್ದಾರೆ. ಅವರ ಸೇರ್ಪಡೆ ತೀರ್ಮಾನ ಯಾವುದೇ ಮಾತುಕತೆ ನಡೆದಿಲ್ಲ. ಕಾಂಗ್ರೆಸ್ ಸೇರ್ಪಡೆ ವಿಚಾರದಲ್ಲಿ ಹೈಕಮಾಂಡ್ ಸೂಕ್ತ ತೀರ್ಮಾನ ತೆಗೆದುಕೊಳ್ಳಲಿದೆ ಎಂದರು.
ಇದನ್ನೂ ಓದಿ:ಸವಾಲುಗಳ ನಡುವೆಯೇ ಬೆಳಗಾವಿಯಲ್ಲಿ ಚಳಿಗಾಲ ಅಧಿವೇಶನ ನಡೆಸುತ್ತಿದ್ದೇವೆ: ಸ್ಪೀಕರ್ ಕಾಗೇರಿ