ಹಾಸನ : ಕೆಎಸ್ಆರ್ಟಿಸಿ ಬಸ್ ಲಾರಿಗೆ ಡಿಕ್ಕಿ ಹೊಡೆದ ಪರಿಣಾಮ ಹಲವರು ಗಾಯಗೊಂಡಿರುವ ಘಟನೆ ಜಿಲ್ಲೆಯ ಚನ್ನರಾಯಪಟ್ಟಣ ತಾಲೂಕಿನ ಅಣ್ಣೇನಳ್ಳಿ-ಜೋಡಿಗಟ್ಟೆ ಮಾರ್ಗ ಮಧ್ಯೆ ಸಂಭವಿಸಿದೆ. ಅಪಘಾತದಲ್ಲಿ 12ಕ್ಕೂ ಅಧಿಕ ಮಂದಿ ಗಾಯಗೊಂಡಿದ್ದು, ಓರ್ವ ಪತ್ರಕರ್ತನಿಗೆ ಗಂಭೀರ ಗಾಯವಾಗಿದೆ. ಗಾಯಾಳುಗಳನ್ನು ಚನ್ನರಾಯಪಟ್ಟಣ ಆಸ್ಪತ್ರೆಗೆ ದಾಖಲಿಸಲಾಗಿದೆ.
ಲಾರಿಗೆ ಡಿಕ್ಕಿ ಹೊಡೆದ ಕೆಎಸ್ಆರ್ಟಿಸಿ ಬಸ್.. 12ಕ್ಕೂ ಅಧಿಕ ಮಂದಿಗೆ ಗಾಯ - ಈಟಿವಿ ಭಾರತ ಕನ್ನಡ
ಕೆಎಸ್ಆರ್ಟಿಸಿ ಬಸ್ ಲಾರಿಗೆ ಡಿಕ್ಕಿ ಹೊಡೆದ ಪರಿಣಾಮ ಹಲವರು ಗಾಯಗೊಂಡಿರುವ ಘಟನೆ ಹಾಸನದಲ್ಲಿ ನಡೆದಿದೆ.

ಲಾರಿಗೆ ಡಿಕ್ಕಿ ಹೊಡೆದ ಕೆಎಸ್ಆರ್ಟಿಸಿ ಬಸ್ : 12ಕ್ಕೂ ಅಧಿಕ ಮಂದಿಗೆ ಗಾಯ
ಸ್ಥಳಕ್ಕೆ ಚನ್ನರಾಯಪಟ್ಟಣ ಗ್ರಾಮಾಂತರ ಪೊಲೀಸರು ಭೇಟಿ ಪರಿಶೀಲನೆ ನಡೆಸಿದ್ದು, ಕೆಎಸ್ಆರ್ಟಿಸಿ ಬಸ್ ಹಾಗೂ ಲಾರಿಯನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಚನ್ನರಾಯಪಟ್ಟಣ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಇದನ್ನೂ ಓದಿ :ಮಂಗಳೂರು: ವೈದ್ಯೆಯೊಂದಿಗೆ ಅಸಭ್ಯ ವರ್ತನೆ ತೋರಿದ ಬಸ್ ಕ್ಲೀನರ್ ಬಂಧನ