ಹಾಸನ:ನಗರದ ಉದ್ದೂರು ಬಳಿಯ ರಿಂಗ್ ರಸ್ತೆಯಲ್ಲಿ ಚಾಲಕನ ನಿಯಂತ್ರಣ ತಪ್ಪಿ ಚಲಿಸುತ್ತಿದ್ದ ಕಾರಿನ ಮೇಲೆ ಮರಳು ತುಂಬಿದ ಲಾರಿ ಉರುಳಿ ಬಿದ್ದಿದ್ದು, ಕಾರಿನಲ್ಲಿದ್ದ ಮೂವರು ಗಂಭೀರವಾಗಿ ಗಾಯಗೊಂಡಿದ್ದಾರೆ.
ಕಾರಿನ ಮೇಲೆ ಬಿದ್ದ ಮರಳಿನ ಲಾರಿ, ಮೂವರ ಆರೋಗ್ಯ ಸ್ಥಿತಿ ಗಂಭೀರ - road accident
ಚಾಲಕನ ನಿಯಂತ್ರಣ ತಪ್ಪಿ ಚಲಿಸುತ್ತಿದ್ದ ಕಾರಿನ ಮೇಲೆ ಮರಳು ತುಂಬಿದ ಲಾರಿ ಉರುಳಿ ಬಿದ್ದಿರುವ ಘಟನೆ ಹಾಸನದಲ್ಲಿ ತಡರಾತ್ರಿ ನಡೆದಿದೆ.
ಅಪಘಾತ
ಘಟನೆಯಲ್ಲಿ ಗಾಯಗೊಂಡವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ. ಅಪಘಾತದ ನಂತರ ಲಾರಿ ಚಾಲಕ ಸ್ಥಳದಿಂದ ಪರಾರಿಯಾಗಿದ್ದಾನೆ.
ಹಾಸನ ಸಂಚಾರಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.